ಕೊಳ್ಳೇಗಾಲ: ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಗೆ ವಲಸೆ ಬಂದಿದ್ದಾರೆ. ನಾನು ಮೊಳಕಾಲ್ಮೂರು ಹಾಗೂ ಬಾದಾಮಿ ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ಎರಡು ಕ್ಷೇತ್ರದಲ್ಲೂ ಕಾರ್ಯಕರ್ತರು ಹಾಗೂ ಮತದಾರರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೇಳಿದರು. ಅವರು ಹನೂರು ಕ್ಷೇತ್ರ ವ್ಯಾಪ್ತಿಯ ಪಾಳ್ಯ ಹಾಗೂ ಕೌದಳ್ಳಿ ಗ್ರಾಮದಲ್ಲಿ ಅಯೋಜಿಸಲಾಗಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಮತಯಾಚಿಸಿ ಮಾತನಾಡಿ. ರಾಜ್ಯದಲ್ಲಿ 80 ಕ್ಷೇತ್ರಗಳಲ್ಲಿ ಈಗಾಗಲೇ ಪ್ರಚಾರ…
ಹೈವೋಲ್ಟೇಜ್ ಚಾಮುಂಡೇಶ್ವರಿಯಲ್ಲಿ ರಂಗೇರುತ್ತಿದೆ ಚುನಾವಣಾ ಕಣ
May 4, 2018ಮೈಸೂರು: ರಾಜ್ಯವಷ್ಟೇ ಅಲ್ಲದೆ ಇಡೀ ದೇಶವೇ ಎದುರು ನೋಡು ತ್ತಿರುವ ಮೈಸೂರಿನ ಚಾಮುಂಡೇಶ್ವರಿ ಹೈವೋಲ್ಟೇಜ್ ಕ್ಷೇತ್ರದಲ್ಲಿ ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್‍ನಿಂದ ಸ್ವತಃ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಅವರ ಪ್ರತಿಸ್ಪರ್ಧಿಯಾಗಿ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಸ್ಪರ್ಧಿಸಿರುವುದೇ ಚಾಮುಂಡೇಶ್ವರಿ ಕ್ಷೇತ್ರ ಹೈವೋಲ್ಟೇಜ್ ಕಣವಾಗಲು ಪ್ರಮುಖ ಕಾರಣ. ಹಿಂದೊಮ್ಮೆ ಉಪ ಚುನಾವಣೆ ಅನಿ ವಾರ್ಯವಾಗಿ ಜೆಡಿಎಸ್‍ನ ಶಿವಬಸಪ್ಪ ವಿರುದ್ಧ ಕಣಕ್ಕಿಳಿ ದಿದ್ದ ಸಿದ್ದರಾಮಯ್ಯ, ಬಲು ತ್ರಾಸದಾಯಕವಾಗಿ ಅತ್ಯಲ್ಪ ಮತಗಳಿಂದ ಗೆಲುವು ಸಾಧಿಸಿದ…
ಜಾತಿ ಬೀಜ ಬಿತ್ತುವ ಭ್ರಷ್ಟ ಸಿಎಂ ಸಿದ್ದರಾಮಯ್ಯ: ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ
April 28, 2018ಹಾಸನ: ಜಾತಿ ಬೀಜ ಬಿತ್ತುವ ಭ್ರಷ್ಟ ಮುಖ್ಯಮಂತ್ರಿಯನ್ನು ಹಿಂದೆಂದು ನಾನು ಕಂಡಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ತಾಲೂಕಿನ ಸಾಲಗಾಮೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಭೆ ಉದ್ಘಾಟಿಸಿ ಮಾತ ನಾಡಿದ ಅವರು, ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಸ್ವಾರ್ಥದಿಂದ ಹಗಲು ದರೋಡೆ ಮಾಡಿರುವುದಲ್ಲದೆ, ವೀರಶೈವ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿ ದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯನಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ನಾನು ಎಲ್ಲೂ ಕಂಡಿಲ್ಲ ಎಂದು ಆಕ್ರೋಶವ್ಯಕ್ತ ಪಡಿಸಿದರು. ಸಿದ್ದರಾಮಯ್ಯರ…
ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು
April 26, 2018ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಎಷ್ಟೇ ಪ್ರಚಾರ ನಡೆಸಿದರೂ ರಾಜ್ಯ ದಲ್ಲಿ ಅದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅಭಿಪ್ರಾಯಪಟ್ಟರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬುಧವಾರ ಮೈಸೂ ರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಇನ್ನಿತರರು ಪಕ್ಷದ ಪರ ಪ್ರಚಾರ ಕೈಗೊಳ್ಳಲಿ ದ್ದಾರೆ….
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಬಿರುಸಿನ ಪ್ರಚಾರ
April 26, 2018ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು. ಕಾಮನಕೆರೆ ಹುಂಡಿ, ಹಳೇ ಕೆಸರೆ ಸೇರಿದಂತೆ 12 ಗ್ರಾಮಗಳಲ್ಲಿ ರೋಡ್ ಶೋ ನಡೆಸಿದ ವೇಳೆ ಎಲ್ಲೆಡೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಆರತಿ ಎತ್ತಿ ಅದ್ಧೂರಿಯಾಗಿ ಬರಮಾಡಿಕೊಂಡರು. ಮದ್ಯಾಹ್ನ 1.15ರ ವೇಳೆಗೆ ಕಾಮನಕೆರೆಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ರೋಡ್ ಶೋ ಉದ್ದಕ್ಕೂ ಅವರಿಗೆ ಪುಷ್ಪಾರ್ಚನೆಯ ಸ್ವಾಗತ ದೊರೆಯಿತು. ಸಿಎಂ ಪರ…
ಕನಿಷ್ಠ 130 ಸ್ಥಾನ ಗೆದ್ದೇ ಗೆಲ್ಲುತ್ತೇವೆ
April 24, 2018ಮೈಸೂರು: ಮೇ 12ರಂದು ನಡೆಯುವ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 130 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮ ವಿಶ್ವಾಸದಿಂದ ನುಡಿದರು. ಮೈಸೂರಿನ ಅವರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ, ವಾಸ್ತವವಾಗಿ ಉತ್ತರ ಕರ್ನಾ ಟಕದಲ್ಲಿ ಕಾಂಗ್ರೆಸ್-ಬಿಜೆಪಿ, ಹಳೇ ಮೈಸೂರು ಭಾಗದ 6-7 ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಸ್ಪರ್ಧೆ ಇದೆ. ಇದರಲ್ಲಿ ಕಾಂಗ್ರೆಸ್ ಕನಿಷ್ಠ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ನನಗೆ ಚಾಮುಂಡೇಶ್ವರಿ, ವರುಣಾ ಹೇಗೋ…
ಬಾದಾಮಿಯಲ್ಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?
April 19, 2018ಮುನಿಸಿಕೊಂಡ ಸಿಎಂ ಜೊತೆ ಪರಮೇಶ್ವರ್, ವೇಣುಗೋಪಾಲ್ ಮಾತುಕತೆ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದ ಜೊತೆ ಬಾದಾಮಿ ಯಲ್ಲೂ ಸ್ಪರ್ಧಿಸುವ ಸಾಧ್ಯತೆಗಳು ನಿಚ್ಚಳವಾಗಿ ಕಂಡುಬರುತ್ತಿದೆ. ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅದನ್ನು ಒಪ್ಪದೇ ಚಾಮುಂಡೇಶ್ವರಿ ಯಲ್ಲಿ ಮಾತ್ರ ಸ್ಪರ್ಧಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಮುಖ್ಯಮಂತ್ರಿಗಳು ನವದೆಹಲಿಯಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆಗೂ ಮುನ್ನವೇ ಬೆಂಗಳೂರಿಗೆ ಆಗಮಿಸಿದ್ದರು. ಮರುದಿನವೇ ಮೈಸೂರಿಗೆ ಬಂದ ಮುಖ್ಯಮಂತ್ರಿಗಳು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳದೇ ಕಳೆದ ಮೂರು…
ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶವಿದೆ, ನನಗೆ ಮತ ಹಾಕಿ: ಚಾಮುಂಡೇಶ್ವರಿ ಕ್ಷೇತ್ರದ ಜನರಲ್ಲಿ ಸಿದ್ದರಾಮಯ್ಯ ಮನವಿ
April 19, 2018ಮೈಸೂರು: ಚಾಮುಂಡೇಶ್ವರಿಯಲ್ಲಿ 5 ಬಾರಿ ಗೆಲ್ಲಿಸಿ ಆಶೀರ್ವಾದ ಮಾಡಿರುವ ಕ್ಷೇತ್ರದ ಜನತೆ ಈ ಬಾರಿಯೂ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇ ಶ್ವರಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ಕೈಗೊಂಡ ಅವರು ಬೀರಿಹುಂಡಿ, ಜಟ್ಟಿಹುಂಡಿ, ಕುಮಾರಬೀಡು ಸೇರಿದಂತೆ ವಿವಿಧ ಕಡೆಗಳಲ್ಲಿ ರೋಡ್ ಶೋ ನಡೆಸಿ, ಜನರನ್ನುದ್ದೇಶಿಸಿ ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ರಾಜ್ಯದ ಜನತೆ ಮತ್ತೆ…
ಸಮಾನತೆಯ ಹರಿಕಾರ ಬಸವಣ್ಣ: ಮುಖ್ಯಮಂತ್ರಿ ಸಿದ್ದರಾಮಯ್ಯ
April 19, 2018ಬೆಂಗಳೂರು: 12ನೇ ಶತಮಾನದ ಲಿಂಗಾಯತ ತತ್ವಜ್ಞಾನಿ, ವಚನಕಾರ ಬಸವಣ್ಣನವರನ್ನು ಸಮಾನತೆಯ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಬಸವಣ್ಣ ಒಬ್ಬ ತತ್ವಜ್ಞಾನಿಯಾಗಿದ್ದು ಅವರಿಗೆ ಸಾಮಾಜಿಕ ನ್ಯಾಯ ಮುಖ್ಯವಾಗಿತ್ತು. ಸಮಾನತೆಯ ಹರಿಕಾರರಾಗಿದ್ದರು. ಸಮಾಜದಲ್ಲಿ ಕ್ರಾಂತಿಯನ್ನು ತರಲು ಅವರು ಯಾವಾಗಲೂ ಹಂಬಲಿಸುತ್ತಿದ್ದರು ಎಂದರು. ಬಸವ ಜಯಂತಿ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಸವ ಮೂರ್ತಿಗೆ ಹಾರ ಹಾಕಲು ಬಿಡಬಾರದು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದರು. ಬಸವ ಜಯಂತಿಯನ್ನು ಆಚರಿಸುವ ನೈತಿಕ ಹಕ್ಕು ಸಿದ್ದರಾಮಯ್ಯನವರಿಗಿಲ್ಲ ಎಂದು ಶೋಭಾ ಕರಂದ್ಲಾಜೆ ಟೀಕಿಸಿದ್ದರು.
ಬಿಜೆಪಿ ಪಾರ್ಟಿ ಆಫ್ ಕ್ರಿಮಿನಲ್ಸ್: ಸಿಎಂ ಗರಂ
April 19, 2018ಮೈಸೂರು: ಬಿಜೆಪಿ ಎಂದರೆ ಅದು ಪಾರ್ಟಿ ಆಫ್ ಕ್ರಿಮಿನಲ್ಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿ ಸಿದರು. ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ಕ್ರಿಮಿನಲ್‍ಗಳು ಎಂದರು. ಹಿಂದು ಹುಲಿ ಹತ್ಯೆಗೆ ಸಂಚು ನಡೆದಿದ್ದು, ಇದರಲ್ಲಿ ಸಿಎಂ ನೇರ ಕಾರಣ ಎಂದು ಸಂಸದ ಪ್ರತಾಪ್‍ಸಿಂಹ ಆರೋಪ ಮಾಡಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಇಷ್ಟೊಂದು ಕೀಳು ಮಟ್ಟದ ಕ್ರಿಮಿನಲ್ ಬ್ರೈನ್ ಬಿಜೆಪಿಯವರದ್ದು. ಅವರ ಮನಸ್ಥಿತಿ…