Tag: Siddaramaiah

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ
ಮೈಸೂರು

ಮಧ್ಯಂತರ ಚುನಾವಣೆ ಸನ್ನಿವೇಶ ನಿರ್ಮಾಣವಾಗಿಲ್ಲ

June 25, 2019

ಮೈಸೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಮೈತ್ರಿ ಸರ್ಕಾರವೇ ಐದು ವರ್ಷ ಪೂರ್ಣಗೊಳಿಸುತ್ತದೆ ಎಂದು ಉಪ ಮುಖ್ಯ ಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದಿಲ್ಲಿ ಪ್ರತ್ಯೇಕವಾಗಿ ತಿಳಿಸಿದರು. ಮಧ್ಯಂತರ ಚುನಾವಣೆ ನಡೆಯುವ ಸನ್ನಿವೇಶ ರಾಜ್ಯದಲ್ಲಿ ನಿರ್ಮಾಣವಾಗಿಲ್ಲ. ಮುಂದಿನ ನಾಲ್ಕು ವರ್ಷ ಮೈತ್ರಿ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸುತ್ತೂರಿನಲ್ಲಿಂದು ತಿಳಿಸಿದರು. ಮಾಧ್ಯಮ ದವರಿಗೆ…

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ
ಮೈಸೂರು

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ವರಿಷ್ಠರ ಚಿಂತನೆ

June 12, 2019

ಬೆಂಗಳೂರು: ರಾಜ್ಯದ ಆಡಳಿತಾರೂಢ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಮೌನಕ್ಕೆ ಶರಣಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಕಳೆದ ಭಾನುವಾರ ರಾತ್ರಿ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ…

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

June 5, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಡಗೂರು ಎಚ್. ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇ ಗೌಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ್ದ ಲ್ಲದೆ, ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ, ಹುಣಸೂರು ಕ್ಷೇತ್ರದ ಜನರ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಮ್ರ ವಾಗಿ ಕೋರುತ್ತೇನೆ ಎಂದು ಕೇಳಿಕೊಂಡಿದ್ದಾರೆ. ವಿಶ್ವನಾಥ್ ರಾಜೀನಾಮೆ ಬಗ್ಗೆ ಪಕ್ಷ ಯಾವುದೇ ತೀರ್ಮಾನ ಕೈಗೊಂಡಿಲ್ಲವಾದರೂ, ಪಕ್ಷ ಸಂಘಟನೆ…

ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ
ಮೈಸೂರು

ಪಕ್ಷದ ಬಗ್ಗೆ ತಿಳುವಳಿಕೆ ಇಲ್ಲದವರಿಗೆ ಮಣೆ ಹಾಕಿದ್ದೇ ಕಾಂಗ್ರೆಸ್‍ನ ಇಂದಿನ ಸ್ಥಿತಿಗೆ ಕಾರಣ: ರಾಮಲಿಂಗಾರೆಡ್ಡಿ

June 5, 2019

ಬೆಂಗಳೂರು: ಪಕ್ಷದ ಕುರಿತು ಏನೂ ಅರಿವಿಲ್ಲದೇ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಪರಿಸ್ಥಿತಿಗೆ ಕಾರಣ. ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಏಕೈಕ ಸ್ಥಾನ ಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ದಲ್ಲಿ…

ಲೋಕಸಭಾ ಚುನಾವಣೆ ಹೀನಾಯ ಸೋಲಿಗೆ ಮೊದಲು ಸಿದ್ದರಾಮಯ್ಯಗೆ  ನೋಟೀಸ್ ನೀಡಿ: ರೋಷನ್ ಬೇಗ್
ಮೈಸೂರು

ಲೋಕಸಭಾ ಚುನಾವಣೆ ಹೀನಾಯ ಸೋಲಿಗೆ ಮೊದಲು ಸಿದ್ದರಾಮಯ್ಯಗೆ ನೋಟೀಸ್ ನೀಡಿ: ರೋಷನ್ ಬೇಗ್

June 5, 2019

ಬೆಂಗಳೂರು: ಪ್ರಸಕ್ತ ಲೋಕಸಭಾ ಚುನಾ ವಣೆಯಲ್ಲಿ ಪಕ್ಷ ದಯನೀಯವಾಗಿ ಸೋಲಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್-ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾರಣರಾಗಿದ್ದು, ಈ ಹಿನ್ನೆಲೆಯಲ್ಲಿ ಮೊದಲು ಅವರಿಗೆ ಶೋಕಾಸ್ ನೋಟೀಸ್ ಜಾರಿ ಮಾಡಬೇಕೆಂದು ಮಾಜಿ ಸಚಿವ, ಹಿರಿಯ ಮುಖಂಡ ರೋಷನ್ ಬೇಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಳು ಬಾರಿ ಗೆದ್ದಿರುವ ತಮಗೆ ಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಟೀಕೆ ಮಾಡಿ ರುವ ಬೆನ್ನಲ್ಲೇ ಇದೀಗ…

ಈಗಲೂ ಇವಿಎಂಗಳ ಮೇಲಿನ ಅನುಮಾನ ಕಾಡುತ್ತಿದೆ
ಮೈಸೂರು

ಈಗಲೂ ಇವಿಎಂಗಳ ಮೇಲಿನ ಅನುಮಾನ ಕಾಡುತ್ತಿದೆ

June 4, 2019

ಮೈಸೂರು: ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು, ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಯದ್ವಾ ತದ್ವಾ ಲೀಡ್ ಬಂದಿದ್ದ ಕಡೆ ಕಾಂಗ್ರೆಸ್‍ಗೆ ಹೆಚ್ಚು ಮತ ಲಭಿಸಿರು ವುದು ಇವಿಎಂ ಮೇಲಿನ ಅನುಮಾನಕ್ಕೆ ಪುಷ್ಟಿ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಇವಿಎಂಗಳ ಮೇಲೆ ಅನುಮಾನ ವ್ಯಕ್ತ ಪಡಿಸಿದ್ದಾರೆ. ಮೈಸೂರಿನ ರಾಮಕೃಷ್ಣನಗರದ ಲ್ಲಿರುವ ತಮ್ಮ ನಿವಾಸದ ಬಳಿ ಸೋಮ ವಾರ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು. ಸ್ಥಳೀಯ ಸಂಸ್ಥೆಗಳಿಗೆ ನಡೆದಿರುವ ಚುನಾವಣೆಯ…

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ
ಮೈಸೂರು

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ

June 3, 2019

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿ ಆಪರೇ ಷನ್ ನಡೆಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಕೈ ಕುಲುಕುತ್ತಿರುವ ಫೋಟೋ ವೈರಲ್ ಆಗಿದೆ. ಬಿಜೆಪಿಯ ಶಿರಗುಪ್ಪ ಶಾಸಕ ಸೋಮಲಿಂಗಪ್ಪ, ಈ ಹಿಂದೆ ಜೆಡಿಎಸ್ ಶಾಸಕರಾಗಿದ್ದು, ಹಾಲಿ ರಾಯ ಚೂರು ನಗರದ ಬಿಜೆಪಿ ಶಾಸಕರಾಗಿ ರುವ ಡಾ.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜೂಗೌಡ, ಕನಕಗಿರಿ ಶಾಸಕ…

ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಲು ಸಿದ್ದರಾಮಯ್ಯ ಚಿಂತನೆ
ಮೈಸೂರು

ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಲು ಸಿದ್ದರಾಮಯ್ಯ ಚಿಂತನೆ

May 30, 2019

ಬೆಂಗಳೂರು: ಇತ್ತೀಚಿನ ರಾಷ್ಟ್ರ ಮಟ್ಟದ ರಾಜಕೀಯ ವಿದ್ಯಮಾನದಲ್ಲಿ ರಾಜಕಾರಣ ಮಾಡುವುದು ಕಷ್ಟ ಎಂಬ ನಿಲುವಿಗೆ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಲು ಚಿಂತನೆ ನಡೆಸಿದ್ದಾರೆ. ರಾಜ್ಯ ವಿಧಾನಸಭೆಗೆ ನಾಲ್ಕು ವರ್ಷಗಳ ನಂತರ ಚುನಾವಣೆ ಬಂದರೂ ಒಂದೇ, ಮಧ್ಯಂತರ ಚುನಾವಣೆ ಬಂದರೂ ಒಂದೇ, ಚುನಾವಣಾ ರಾಜಕೀಯದಲ್ಲಿ ನನಗೆ ಆಸಕ್ತಿ ಉಳಿದಿಲ್ಲ ಎಂದು ಆಪ್ತರ ಬಳಿ ಅಳಲು ತೋಡಿಕೊಂಡಿದ್ದಾರೆ. ಪ್ರಸಕ್ತ ವಿಧಾನಸಭೆಯ ಅವಧಿ ಮುಗಿದ ಕೂಡಲೇ ಚುನಾ ವಣಾ ರಾಜಕೀಯದಿಂದ ಹಿಂದೆ ಸರಿಯು ತ್ತೇನೆ, ಸೈದ್ಧಾಂತಿಕ…

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ
ಮೈಸೂರು

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ

May 26, 2019

ಬೆಂಗಳೂರು: ಉತ್ತಮ ಅಧಿಕಾರಿಗಳನ್ನು ಆಯಕಟ್ಟಿನ ಸ್ಥಳಗಳಿಗೆ ನಿಯೋಜಿಸಿ ಆಡಳಿತ ಯಂತ್ರದ ಮೇಲೆ ಬಿಗಿ ಹಿಡಿತ ಸಾಧಿಸಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕುಮಾರ ಸ್ವಾಮಿ ಅವರು, ಸಿದ್ದರಾಮಯ್ಯ ನಿವಾಸಕ್ಕೆ ಶುಕ್ರವಾರ ತೆರಳಿ ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಸಲಹೆ ನೀಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ನಿಮ್ಮ ವಿಷಯದಲ್ಲಿ ನಾನೂ ತಪ್ಪಾಗಿ ನಡೆದು ಕೊಂಡಿದ್ದೇನೆ, ನಿಮ್ಮಿಂದಲೂ ತಪ್ಪಾ ಗಿದೆ, ಆಗಿದ್ದನ್ನು ಮರೆಯೋಣ,…

ಪಕ್ಷೇತರರ ಸೆಳೆದ ಸಿದ್ದರಾಮಯ್ಯ
ಮೈಸೂರು

ಪಕ್ಷೇತರರ ಸೆಳೆದ ಸಿದ್ದರಾಮಯ್ಯ

May 26, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರು ಆಪರೇಷನ್ ಕಮಲಕ್ಕೆ ಮುಂದಾಗಿರುವ ಬೆನ್ನಲ್ಲೇ ಸರ್ಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಪ್ರತಿಪಕ್ಷವನ್ನು ಬೆಂಬ ಲಿಸಿದ್ದ ಶಾಸಕರನ್ನು ಮತ್ತೆ ಸೆಳೆದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ವರಿಷ್ಠರು ಮತ್ತು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ವಾಗ್ದಾನದಂತೆ ಇಬ್ಬರು ಪಕ್ಷೇತರ ಸದಸ್ಯರನ್ನು ಮತ್ತೆ ಹಿಂದಕ್ಕೆ ಕರೆತಂದಿದ್ದಾರೆ. ಈಗಾಗಲೇ ನಾಗೇಶ್ ಕಾಂಗ್ರೆಸ್ ಸೇರಿಯಾಗಿದೆ, ಮತ್ತೊಬ್ಬ ಪಕ್ಷೇತರ ಸದಸ್ಯ ಆರ್. ಶಂಕರ್ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡು ಮತ್ತೆ ಮರಳುವ ನಿರ್ಧಾರ ತಿಳಿಸಿದ್ದಾರೆ. ಶಂಕರ್…

1 2 3 4 5 14
Translate »