Tag: Siddaramaiah

ನನಗೆ ಜನರ ಆಶೀರ್ವಾದವಿದೆ, ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ
ಮೈಸೂರು

ನನಗೆ ಜನರ ಆಶೀರ್ವಾದವಿದೆ, ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ

August 25, 2018

ಹೊಳೆನರಸೀಪುರ: ಜನರ ಆಶೀರ್ವಾದವಿದೆ, ನಾನು ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಾಲೂಕಿನ ಹಾಡ್ಯ ಗ್ರಾಮದಲ್ಲಿ ಜರುಗಿದ ಈಶ್ವರ ಹಾಗೂ ವೀರಭದ್ರೇಶ್ವರಸ್ವಾಮಿ ದೇವಸ್ಥಾನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ತಾವು ರಾಜಕೀಯ ದಲ್ಲಿ ಎಂದು ಹೆದರಿ ಓಡಿ ಹೋಗುವುದಿಲ್ಲ. ರಾಜಕೀಯ ನಿಂತ ನೀರಲ್ಲ. ಕಾಲಚಕ್ರ ಸದಾ ಚಲಿಸುತ್ತಿರುತ್ತದೆ. ಅದೇ ರೀತಿ ರಾಜಕೀಯ ಕ್ಷೇತ್ರದಲ್ಲಿ ಸಹಜವಾಗಿ ಬದಲಾವಣೆಯಾಗುತ್ತದೆ. ಜನರ ಆಶೀರ್ವಾದವಿದೆ, ಮತ್ತೊಮ್ಮೆ ನಾನು ಅಧಿಕಾರಕ್ಕೆ ಬಂದೇ ಬರುತ್ತೇನೆ ಎಂದು ಭವಿಷ್ಯ ನುಡಿದರು. ನನ್ನ ಸರ್ಕಾರದ ಅವಧಿಯಲ್ಲಿ…

ಸಮಾಜ ಸೇವಾ ಕಾರ್ಯಗಳ ಮೂಲಕ ಮಾಜಿ  ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ
ಮೈಸೂರು

ಸಮಾಜ ಸೇವಾ ಕಾರ್ಯಗಳ ಮೂಲಕ ಮಾಜಿ  ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

August 13, 2018

ಮೈಸೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 71ನೇ ಜನ್ಮ ದಿನವನ್ನು ಭಾನುವಾರ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ವಿವಿಧ ಸಮಾಜ ಸೇವಾ ಕಾರ್ಯವನ್ನು ನಡೆಸುವ ಮೂಲಕ ಅವರ ಅಭಿಮಾನಿಗಳು ಅರ್ಥ ಪೂರ್ಣವಾಗಿ ಆಚರಿಸಿದರು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಬಡ ಮಹಿಳೆಯರಿಗೆ ಸೀರೆ, ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ವಿವಿಧ ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ನೆಚ್ಚಿನ ನಾಯಕನ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿ, ಜೈಕಾರ ಹಾಕಿದರು. ನಗರ…

ಮೈಸೂರು ಪಾಲಿಕೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯರ ಮೊರೆ  ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು
ಮೈಸೂರು

ಮೈಸೂರು ಪಾಲಿಕೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯರ ಮೊರೆ  ಹೋದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು

August 12, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಹೊರಬೀಳುತ್ತಿದ್ದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಟಿಕೆಟ್ ಗಿಟ್ಟಿಸಿಕೊಳ್ಳಲು ಲಾಭಿ ಆರಂಭಿಸಿದ್ದಾರೆ. ಶನಿವಾರ ಬೆಳಿಗ್ಗೆ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್‍ನ ಅನೇಕ ಹಾಲಿ, ಮಾಜಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಸ್ಥಳೀಯ ಮುಖಂಡರು ಭೇಟಿ ನೀಡಿದ್ದರು. ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಟಿಕೆಟ್ ಗಿಟ್ಟಿಸಲು ಹೀಗೆ ಪಕ್ಷದ ಹಿರಿಯ ನಾಯಕರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಸ್ಥಳೀಯ ಮುಖಂಡರು ದೌಡಾಯಿಸಿದ್ದರು. ಆಕಾಂಕ್ಷಿಗಳು ಟಿಕೆಟ್‍ಗಾಗಿ ಶಿಫಾರಸ್ಸು ಮಾಡುವಂತೆ ಸಿದ್ದರಾಮಯ್ಯ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ
ಮೈಸೂರು

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬೇಡ

August 4, 2018

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡು ಕಣಕ್ಕಿಳಿಯುವುದು ಬೇಡ, ಅಗತ್ಯ ಬಿದ್ದ ಕಡೆಗಳಲ್ಲಿ ಸ್ಥಳೀಯವಾಗಿ ಹೊಂದಾಣಿಕೆಗೆ ಅಲ್ಲಿನ ನಾಯಕರ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆ ಹಾಗೂ ಮೈತ್ರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಕೆಪಿಸಿಸಿ ಕಚೇರಿಯಲ್ಲಿಂದು ಕರೆಯಲಾಗಿದ್ದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ರಾಜ್ಯ ಘಟಕದ ನಿರ್ಧಾರವನ್ನು ಕೇಂದ್ರ ವರಿಷ್ಠರಿಗೆ ತಿಳಿಸಲಾಗುವುದು. ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಲೋಕಸಭೆ…

ಕುತೂಹಲ ಕೆರಳಿಸಿರುವ ಸಿದ್ದರಾಮಯ್ಯ ಔತಣಕೂಟ
ಮೈಸೂರು

ಕುತೂಹಲ ಕೆರಳಿಸಿರುವ ಸಿದ್ದರಾಮಯ್ಯ ಔತಣಕೂಟ

August 2, 2018

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‍ನ ಸಚಿವರಿಗೆ ಔತಣಕೂಟ ಏರ್ಪಡಿಸಿ ತಮ್ಮ ರಾಜಕೀಯದಾಳ ಉರುಳಿಸಲು ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರು ವಿಧಾನಸಭೆ ಅಧಿವೇಶನ ನಡೆಯುವ ವೇಳೆ ಶಾಸಕರಿಗೆ ಔತಣ ಕೂಟ ಏರ್ಪಡಿಸುವುದು ಸಾಮಾನ್ಯವಾಗಿ ನಡೆದು ಬಂದಿದೆ. ಆದರೆ ಈ ಬಾರಿ ಅವರು ಎಐಸಿಸಿ ಕಾರ್ಯಕಾರಿಗೆ ನೇಮಕವಾದ ಹಿನ್ನೆಲೆಯಲ್ಲಿ ಔತಣಕೂಟ ಏರ್ಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಕೇವಲ ಸಚಿವರನ್ನು ಮಾತ್ರ ಆಹ್ವಾನಿಸಿ ರುವುದು ಹಲವಾರು ಊಹಾಪೋಹಗಳಿಗೆ ಎಡೆ…

ವರುಣಾ ಕ್ಷೇತ್ರದ ವೀರಶೈವ ಲಿಂಗಾಯಿತ ಮುಖಂಡರಿಂದ  ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸನ್ಮಾನ
ಮೈಸೂರು

ವರುಣಾ ಕ್ಷೇತ್ರದ ವೀರಶೈವ ಲಿಂಗಾಯಿತ ಮುಖಂಡರಿಂದ  ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸನ್ಮಾನ

August 1, 2018

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸಮನ್ವಯ ಸಮಿತಿಯ ಅಧ್ಯಕ್ಷರು ಆಗಿರುವ ಸಿದ್ದರಾಮಯ್ಯನವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವುದಕ್ಕೆ ವರುಣಾ ಕ್ಷೇತ್ರದ ವೀರಶೈವ ಲಿಂಗಾಯತ ಮುಖಂಡರು ಬೆಂಗಳೂರಿನ ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಹುಳಿಮಾವು ಗ್ರಾಮದ ಪರ ಶಿವಮೂರ್ತಿ, ಹಳ್ಳಿಕೆರೆ ಹುಂಡಿ ಗ್ರಾಮದ ಶಿವಕುಮಾರ್, ಕಾರ್ಯ ಗ್ರಾಮದ ನಾಗರಾಜು, ದಾಸನೂರು ಗ್ರಾಮದ ವೀರಭದ್ರಸ್ವಾಮಿ, ನಾಗೇಶ, ಹದಿನಾರು ಗ್ರಾಮದ ಡಿ.ಕೆ.ಶಿವಕುಮಾರ್,…

ಶೋಷಿತ ಸಮುದಾಯಗಳು ಸಿದ್ದರಾಮಯ್ಯರ ಕೊಡುಗೆ ಅರ್ಥ ಮಾಡಿಕೊಳ್ಳದ ಕಾರಣ ಅವರಿಗೆ ಸೋಲಾಯಿತು
ಮೈಸೂರು

ಶೋಷಿತ ಸಮುದಾಯಗಳು ಸಿದ್ದರಾಮಯ್ಯರ ಕೊಡುಗೆ ಅರ್ಥ ಮಾಡಿಕೊಳ್ಳದ ಕಾರಣ ಅವರಿಗೆ ಸೋಲಾಯಿತು

July 31, 2018

ಮೈಸೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ದಿ.ರಾಕೇಶ್ ಸಿದ್ದರಾಮಯ್ಯ 2ನೇ ವರ್ಷದ ಸ್ಮರಣೆ ಅಂಗವಾಗಿ ಸಾಮಾಜಿಕ ನ್ಯಾಯ ಕುರಿತಂತೆ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಅವರು ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸದೇ ಇದ್ದದ್ದೇ ಕಾರಣ ಎಂಬ ಅಭಿಪ್ರಾಯವನ್ನು ಅತಿಥಿಗಳು ವ್ಯಕ್ತಪಡಿಸಿದರು. ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಕೇಶ್ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಸಂಸ್ಥೆ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ…

ಸ್ವಾರ್ಥ ರಾಜಕಾರಣಿಗಳಿಂದ ರಾಜ್ಯ ಪ್ರತ್ಯೇಕತೆಯ ಕೂಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ
ಮೈಸೂರು

ಸ್ವಾರ್ಥ ರಾಜಕಾರಣಿಗಳಿಂದ ರಾಜ್ಯ ಪ್ರತ್ಯೇಕತೆಯ ಕೂಗು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ

July 30, 2018

ಮೈಸೂರು:  ಸ್ವಾರ್ಥ ರಾಜಕಾರಣ ಮಾಡುತ್ತಿರುವವರು ರಾಜ್ಯವನ್ನು ಉತ್ತರ ಹಾಗೂ ದಕ್ಷಿಣ ಕರ್ನಾಟಕ ಎಂದು ಪ್ರತ್ಯೇಕಿಸುತ್ತಿದ್ದು, ವಾಸ್ತವವಾಗಿ ಇರುವುದೊಂದೇ ಕರ್ನಾಟಕ, ಅದು ಅಖಂಡ ಕರ್ನಾಟಕ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಉತ್ತರ ಕರ್ನಾಟಕದ ಬಾದಾಮಿ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿದ್ದು, ವಾಸ್ತವವಾಗಿ ಉತ್ತರ ಮತ್ತು ದಕ್ಷಿಣ ಕರ್ನಾಟಕ ಎಂದು ವಿಂಗಡಿಸುವುದೇ ತಪ್ಪು. ನಮ್ಮದು ಅಖಂಡ ಕರ್ನಾಟಕ. ಇದೀಗ ಉತ್ತರ ಕರ್ನಾಟಕ ಎಂದು ಪ್ರತ್ಯೇಕ ರಾಜ್ಯದ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

July 25, 2018

ಬೆಂಗಳೂರು: ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ, ಯದುವೀರ್ ಅವರನ್ನು ರಾಜಕೀಯಕ್ಕೆ ಕರೆತರುವ ಆಸಕ್ತಿ ಹೊಂದಿದ್ದಾರೆ. ಸಂಸತ್ ಹಾಲ್‍ನಲ್ಲಿ ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ನೀವು ಮೈಸೂರು ಇಲ್ಲವೆ, ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ಮಾಡಿ ಕೊಳ್ಳಿ…

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ

July 24, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವ ಬಗ್ಗೆ ಮರುವಿಮರ್ಶೆ ಮಾಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿರುವ ಸಿದ್ದರಾಮಯ್ಯ, ಇಂದು ಸಂಸತ್ ಹಾಲ್‍ನಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಗೊಂಡ ನಂತರದ ವಿದ್ಯಮಾನಗಳು, ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಮೈತ್ರಿ ಸರ್ಕಾರದ…

1 6 7 8 9 10 14
Translate »