ಮೈಸೂರು: ನಂಜರಾಜ ಬಹದ್ದೂರ್ ಛತ್ರದಲ್ಲಿ ಹಸ್ತಶಿಲ್ಪಿ ಸಂಸ್ಥೆಯು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ 6 ದಿನಗಳ ಕಾಲ ಆಯೋಜಿಸಿರುವ ಬೃಹತ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ `ಸಿಲ್ಕ್ ಇಂಡಿಯಾ-2018’ಕ್ಕೆ ಬುಧವಾರ ಚಾಲನೆ ದೊರೆಯಿತು. ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚೀಪುರಂ ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು ಭಾಗವಹಿಸಿದ್ದು, ದೇಶದ 20ಕ್ಕೂ ಹೆಚ್ಚು ರಾಜ್ಯಗಳ ನೇಕಾರರು, ಕುಶಲಕರ್ಮಿಗಳು ಉತ್ಪಾದಿಸುವ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಟೆಟ್ ಸಿಲ್ಕ್ ಸೀರೆಗಳು, ಅರಿಣ ರೇಷ್ಮೆ…