Tag: Somwarpet

ಸೋಮವಾರಪೇಟೆಯಲ್ಲಿ ಪರಿಸರ ಅರಿವು ಮ್ಯಾರಥಾನ್
ಕೊಡಗು

ಸೋಮವಾರಪೇಟೆಯಲ್ಲಿ ಪರಿಸರ ಅರಿವು ಮ್ಯಾರಥಾನ್

ಸೋಮವಾರಪೇಟೆ: ಇಲ್ಲಿನ ಪಯೋನಿಯರ್ಸ್ ಟೆನ್ನಿಸ್ ಕ್ಲಬ್ ಆಶ್ರಯ ದಲ್ಲಿ ವಿದ್ಯಾರ್ಥಿಗಳು ಹಾಗೂ ಕ್ಲಬ್‍ನ ಸದಸ್ಯ ರಿಗೆ “ರನ್ನಿಂಗ್ ಫಾರ್ ಎ ಬೆಟರ್ ಟುಮಾರೋ” ಹೆಸರಿನ ಮ್ಯಾರಾಥಾನ್ ನಡೆಯಿತು.ಸಮೀಪದ ಬೇಳೂರು ಬಳಿಯಲ್ಲಿ ಮ್ಯಾರಾ ಥಾನ್‍ಗೆ ಕ್ಲಬ್ ಅಧ್ಯಕ್ಷ ಪಿ.ಕೆ. ರವಿ ಚಾಲನೆ ನೀಡಿದರು. ನಂತರ ಮಾತನಾಡಿ, ಪರಿಸ ರಕ್ಕೆ ಇಂದು ಸಾಕಷ್ಟು ಹಾನಿಯಾಗುತ್ತಿದ್ದು, ಮುಂದಿನ ಪೀಳಿಗೆಗೂ ಉತ್ತಮ ಪರಿಸರ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು. ಮ್ಯಾರಥಾನ್‍ನ ಪ್ರೌಢಶಾಲಾ ವಿಭಾಗ…

ಯಲಕನೂರಿನಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ
ಕೊಡಗು

ಯಲಕನೂರಿನಲ್ಲಿ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆ

ಸೋಮವಾರಪೇಟೆ: ತಾಲೂ ಕಿನ ಯಲಕನೂರು ಗ್ರಾಮದಲ್ಲಿ ಶ್ರೀ ಮಹಾ ಲಿಂಗೇಶ್ವರಸ್ವಾಮಿ ದೇವಾಲಯ ಜೀರ್ಣೋ ದ್ಧಾರ ಸಮಿತಿ ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ದೇವಾಲ ಯಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಶ್ರೀ ಮಹಾಲಿಂಗೇಶ್ವರ, ಶ್ರೀ ಗಣಪತಿ, ಶ್ರೀ ನವದುರ್ಗಾ, ಶ್ರೀ ವೀರಭದ್ರೇಶ್ವರ, ಶ್ರೀ ಭದ್ರಕಾಳಿ, ಶ್ರೀ ಕಾಲಭೈರವೇಶ್ವರ, ಶ್ರೀ ನಾಗ ದೇವತೆ, ಶ್ರೀ ಅವಲಕ್ಕಿ ಬಸವಣ್ಣ, ಶ್ರೀ ಭಂಟಿಗ ದೇವರುಗಳ ನೂತನ ದೇವಾ ಲಯ ನಿರ್ಮಾಣಕ್ಕೆ ಬೀರೇದೇವರ ಸಮಿತಿ ಅಧ್ಯಕ್ಷ ಬಿ.ಎಸ್. ದಿಲೀಪ್ ಶಿಲಾನ್ಯಾಸ ನೆರವೇರಿಸಿದರು. ನಂತರ ನಡೆದ ಧಾರ್ಮಿಕ…

ವಿಕಲಚೇತನರಿಗೆ ಸಹಕಾರ ಅಗತ್ಯ
ಕೊಡಗು

ವಿಕಲಚೇತನರಿಗೆ ಸಹಕಾರ ಅಗತ್ಯ

ಸೋಮವಾರಪೇಟೆ: ವಿಕಲ ಚೇತನರ ಬಗ್ಗೆ ಅನುಕಂಪ ತೋರದೆ ಅವರಿಗೆ ಅವಕಾಶ ನೀಡುವ ಮೂಲಕ ಮುಖ್ಯ ವಾಹಿನಿಗೆ ತರುವಂತಾಗಬೇಕು ಎಂದು ತಾಲೂಕು ಪಂಚಾಯ್ತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ತಂಗಮ್ಮ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಆಶ್ರಯದಲ್ಲಿ ವಿಶ್ವ ವಿಕಲ ಚೇತನರ ದಿನಾಚರಣೆ ಅಂಗವಾಗಿ ಪಟ್ಟಣದ ಜಿಎಂಪಿ ಶಾಲಾ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ಅಭ್ಯುದಯಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆ. ಆಕಸ್ಮಿಕವಾಗಿ ವಿಕಲಚೇತ ನರಾಗಿ ಜನಿಸಿದ…

ಸೋಮವಾರಪೇಟೆಯಲ್ಲಿ ಮೇಳೈಸಿದ ರೋಟರಿ ಕಲಾಸಂಗಮ
ಕೊಡಗು

ಸೋಮವಾರಪೇಟೆಯಲ್ಲಿ ಮೇಳೈಸಿದ ರೋಟರಿ ಕಲಾಸಂಗಮ

ಸೋಮವಾರಪೇಟೆ:  ರೋಟರಿ ಕ್ಲಬ್ ಸೋಮವಾರಪೇಟೆ ಹಿಲ್ಸ್ ವತಿ ಯಿಂದ ಇಲ್ಲಿನ ಜಾನಕಿ ಕನ್ವೆನ್‍ಷನ್ ಸಭಾಂಗಣದಲ್ಲಿ ವಲಯ ಮಟ್ಟದ ರೋಟರಿ ಜಿಲ್ಲಾ ಕುಟುಂಬ ಸದಸ್ಯರ ಕಲಾ ಸಂಗಮ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ರೋಟರಿ ಜಿಲ್ಲಾ ಗವರ್ನರ್ ಪಿ. ರೋಹಿನಾಥ್ ಉದ್ಘಾಟಿಸಿ ದರು. ನಂತರ ಮಾತನಾಡಿ, ಸಂಸ್ಥೆಯಲ್ಲಿ ಸದಸ್ಯರ ನಡುವೆ ಒಡನಾಟ ಹೆಚ್ಚಿಸುವಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚಿನ ಪಾತ್ರ ವಹಿಸುವುದರಿಂದ ಕಲಾ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸಂಸ್ಥೆಯ ಸದಸ್ಯರಲ್ಲಿರುವ ಪ್ರತಿಭೆ ಯನ್ನು ಗುರುತಿಸಿ ಹೊರ ತರಲು ಸಹ…

ಸೋಮವಾರಪೇಟೆಯಲ್ಲಿ ಅಂಬಿಗೆ ಶ್ರದ್ಧಾಂಜಲಿ
ಕೊಡಗು

ಸೋಮವಾರಪೇಟೆಯಲ್ಲಿ ಅಂಬಿಗೆ ಶ್ರದ್ಧಾಂಜಲಿ

ಸೋಮವಾರಪೇಟೆ: ಚಿತ್ರನಟ ಅಂಬರೀಶ್ ಅವರ ನಿಧನಕ್ಕೆ ಇಲ್ಲಿನ ಅಂಬರೀಶ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿ ಸಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾ ಣದ ಪುಟ್ಟಪ್ಪ ವೃತ್ತದಲ್ಲಿ ಅಂಬರೀಶ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿ.ಸಿ.ಶಶಿ ಕುಮಾರ್, ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು, ಆಟೋ ಚಾಲಕ ಹಸನಬ್ಬ, ಸಂಘದ ಸದಸ್ಯರುಗಳಾದ ಆನಂದ, ರವಿ, ಸ್ವಾಮಿ, ಸುರೇಂದ್ರ, ಜಮೀಲ್ ಮತ್ತಿತರರು ಇದ್ದರು.

ಸೋಮವಾರಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ
ಕೊಡಗು

ಸೋಮವಾರಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ

ಸೋಮವಾರಪೇಟೆ:  ಇಲ್ಲಿನ ಜೇಸಿ ಸಂಸ್ಥೆಯ 2018ರ ಸಪ್ತಾಹದ ಕಾರ್ಯಕ್ರ ಮದ ಮೂರನೆ ದಿನ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ 4ರಿಂದ 7 ಹಾಗೂ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನಂಜಮ್ಮ ಸಮು ದಾಯ ಭವನದಲ್ಲಿ ಜಾನಪದ ಲೋಕದ ಚಿತ್ರ ಬಿಡಿಸುವ ಸ್ಪರ್ಧೆ ಮತ್ತು ನಂತರ ಬರ ವಣಿಗೆ ಸ್ಪರ್ಧೆ ನಡೆಯಿತು. ಸಂಜೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗ್ರೂಪ್ ಡ್ಯಾನ್ಸ್ ಸ್ಪರ್ಧೆ ನಡೆಯಿತು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಕೆ.ಎ. ಪ್ರಕಾಶ್, ಕಾರ್ಯದರ್ಶಿ ಎಂ.ಎ….

ಟಿಪ್ಪು ಜಯಂತಿ ವಿರುದ್ಧ ಸೋಮವಾರಪೇಟೆಯಲ್ಲಿ ಪ್ರತಿಭಟನೆ
ಕೊಡಗು

ಟಿಪ್ಪು ಜಯಂತಿ ವಿರುದ್ಧ ಸೋಮವಾರಪೇಟೆಯಲ್ಲಿ ಪ್ರತಿಭಟನೆ

ಸೋಮವಾರಪೇಟೆ: ನ.10ರಂದು ನಡೆಯುವ ಟಿಪ್ಪು ಸುಲ್ತಾನ್ ಜಯಂತಿ ಯನ್ನು ವಿರೋಧಿಸಿ, ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಹಾಗು ಶಾಸಕ ಅಪ್ಪಚ್ಚು ರಂಜನ್ ಮುಂದಾಳತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು. ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹಾದಿಯುದ್ದಕ್ಕೂ ಸಮ್ಮಿಶ್ರ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

ಕಳಪೆ ಕಾಮಗಾರಿ ವಿರುದ್ಧ ಹೋರಾಟದ ಎಚ್ಚರಿಕೆ
ಕೊಡಗು

ಕಳಪೆ ಕಾಮಗಾರಿ ವಿರುದ್ಧ ಹೋರಾಟದ ಎಚ್ಚರಿಕೆ

ಸೋಮವಾರಪೇಟೆ: ತಾಲೂಕಿನ 40 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2017-18ರ ಸಾಲಿನ ಕೊಡಗು ಪ್ಯಾಕೇಜ್ ಕಾಮಗಾರಿಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಲೋಕೋ ಪಯೋಗಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆರ್‍ಟಿಐ ಕಾರ್ಯಕರ್ತ ಬಿ.ಪಿ.ಅನಿಲ್ ಕುಮಾರ್ ಎಚ್ಚರಿಸಿದ್ದಾರೆ. ಕೊಡಗು ಪ್ಯಾಕೇಜ್ ಕಾಮಗಾರಿ ಗಳಲ್ಲಿ ಕಳಪೆ ಹಾಗು ಅಕ್ರಮ ನಡೆದಿದೆ ಎಂಬ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರ ಸೂಚನೆ ಯಂತೆ ಇಲಾಖೆಯ ಅಧೀಕ್ಷಕ ಇಂಜಿನಿ ಯರ್‍ಗಳ ತಂಡ, ತಾಲ್ಲೂಕಿನಲ್ಲಿ ಕೈಗೊಂಡಿ ರುವ ಕಾಮಗಾರಿಗಳ ಪರಿಶೀಲನೆ…

ಸೋಮವಾರಪೇಟೆ: ಕಾಂಗ್ರೆಸ್ 4, ಜೆಡಿಎಸ್-ಬಿಜೆಪಿಗೆ ತಲಾ 3 ಸ್ಥಾನ
ಕೊಡಗು

ಸೋಮವಾರಪೇಟೆ: ಕಾಂಗ್ರೆಸ್ 4, ಜೆಡಿಎಸ್-ಬಿಜೆಪಿಗೆ ತಲಾ 3 ಸ್ಥಾನ

ಸೋಮವಾರಪೇಟೆ:  ಇಲ್ಲಿನ ಪಟ್ಟಣ ಪಂಚಾಯಿತಿಯ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ 22 ವರ್ಷಗಳ ಬಿಜೆಪಿ ಆಡಳಿತಕ್ಕೆ ತೆರೆ ಎಳೆದಿದೆ. ಒಟ್ಟು 11 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 4, ಜೆಡಿಎಸ್ 3, ಬಿಜೆಪಿ 3 ಹಾಗೂ ಪಕ್ಷೇ ತರ ಅಭ್ಯರ್ಥಿ 1 ಸ್ಥಾನ ಗಳಿಸಿದ್ದಾರೆ. ವಾರ್ಡ್ 1ರಲ್ಲಿ ಕಾಂಗ್ರೆಸ್‍ನ ಡಿ.ವಿ.ಉದಯ ಶಂಕರ್, 2ನೇ ವಾರ್ಡ್‍ನಲ್ಲಿ ಬಿಜೆಪಿಯ ಪಿ.ಕೆ.ಚಂದ್ರು, 3ನೇ ವಾರ್ಡ್‍ನಲ್ಲಿ ಬಿಜೆಪಿಯ ನಳಿನಿ ಗಣೇಶ್, 4ನೇ ವಾರ್ಡ್‍ನಲ್ಲಿ ಜೆಡಿಎಸ್‍ನ ಬಿ.ಸಂಜೀವ,…

ಅಕ್ರಮವಾಗಿ ಶ್ರೀಗಂಧ ಶೇಖರಣೆ: ಮೂವರ ಬಂಧನ
ಕೊಡಗು

ಅಕ್ರಮವಾಗಿ ಶ್ರೀಗಂಧ ಶೇಖರಣೆ: ಮೂವರ ಬಂಧನ

ಸೋಮವಾರಪೇಟೆ: ಅಕ್ರಮವಾಗಿ ಶ್ರೀಗಂಧವನ್ನು ಶೇಖರಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ಬಂಧಿಸಿದ್ದಾರೆ. ಬಜೆಗುಂಡಿ ಗ್ರಾಮದ ನಿವಾಸಿ ಸುದೀಪ್(ಸುಧೀರ್), ಪಿ.ಕೆ. ಸುರೇಶ್ (ಸೂರಿ), ಯಡವ ನಾಡು ಗ್ರಾಮದ ಎನ್.ಡಿ. ಹೇಮಕುಮಾರ್ ಬಂಧಿತ ಆರೋಪಿಗಳಾಗಿದ್ದು, ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸುರೇಶ್ ಅವರ ಮನೆಯ ಸುತ್ತಮುತ್ತ ಶೇಖರಿಸಿ ಟ್ಟಿದ್ದ ಶ್ರೀಗಂಧವನ್ನು ಗರಗಂದೂರು ಗ್ರಾಮದ ಬಾಪುಟ್ಟಿ ಎಂಬವರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ನೇತೃತ್ವದ ತಂಡ ದಾಳಿ ನಡೆಸಿದೆ. ಬಂಧಿತರು ನೀಡಿದ ಹೇಳಿಕೆಯನ್ನಾಧರಿಸಿ…

1 2 3 7