ಹೈದರಾಬಾದ್: 2018ರ ಸೌತ್ ಫಿಲಂ ಫೇರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಶನಿವಾರ ಹೈದರಾಬಾದ್‍ನಲ್ಲಿ ನಡೆದಿದೆ. ಈ ಅದ್ಧೂರಿ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. 2018ನೇ ಸಾಲಿನ ಸೌತ್ ಫಿಲಂ ಫೇರ್ ಅವಾರ್ಡ್ ಪ್ರಕಟವಾಗಿದ್ದು, ರಾಜಕುಮಾರ ಚಿತ್ರಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಬ್ಯೂಟಿಫುಲ್ ಮನಸ್ಸುಗಳು ಚಿತ್ರಕ್ಕಾಗಿ ನಟಿ ಶೃತಿ ಹರಿಹರನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಪುನೀತ್ ರಾಜ್‍ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸುವಾಗ ಪುನೀತ್ ಬಾಲ್ಯದಿನಗಳಲ್ಲಿ…