Tag: SR Mahesh

ಗಾಣಿಗ ಸೇರಿದಂತೆ ಸಣ್ಣ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸಿಎಂ ಚಿಂತನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮೈಸೂರು

ಗಾಣಿಗ ಸೇರಿದಂತೆ ಸಣ್ಣ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ಸಿಎಂ ಚಿಂತನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

August 6, 2018

ಮೈಸೂರು: ಗಾಣಿಗ ಸಮುದಾಯ ಸೇರಿದಂತೆ ಪ್ರವರ್ಗ `2ಎ’ ವ್ಯಾಪ್ತಿಗೆ ಬರುವ ಸಣ್ಣಸಣ್ಣ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೇಳಿದರು. ಮೈಸೂರಿನ ಪುರಭವನದಲ್ಲಿ ಮೈಸೂರು ಜಿಲ್ಲಾ ಗಾಣಿಗರ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳಲ್ಲಿ ಬಹುತೇಕ ಸಣ್ಣ ಸಮುದಾಯಗಳು ತೀರ ಹಿಂದಿವೆ. ಇವುಗಳು ಬಲಾಢ್ಯ ಸಮುದಾಯಗಳ ನಡುವೆ…

ತಿಂಗಳಿಗೊಂದು ಗ್ರಾಮದಲ್ಲಿ ವಾಸ್ತವ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮೈಸೂರು

ತಿಂಗಳಿಗೊಂದು ಗ್ರಾಮದಲ್ಲಿ ವಾಸ್ತವ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

August 5, 2018

ಚುಂಚನಕಟ್ಟೆ:  ಅಭಿವೃದ್ದಿ ಕೆಲಸಗಳು ಮತ್ತು ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳು ಒಂದೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ತಾಲೂಕಿನ ಮಿರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯ ಮತ್ತು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಅಭಿವೃದ್ದಿ ಮತ್ತು ಜನತೆಯ ಕುಂದು ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಇಲಾಖೆಯ…

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು. ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ…

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ
ಕೊಡಗು

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ

August 4, 2018

ಮಡಿಕೇರಿ:  ಮಡಿಕೇರಿ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪ್ರತೀ ತಿಂಗಳ ಎರಡನೇ ಶುಕ್ರವಾರ (ರಜಾ ದಿನ ಹೊರತುಪಡಿಸಿ) ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ನೂತನ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯನ್ನು ಉದ್ಘಾಟಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವು ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು….

ವನ್ಯ ಪ್ರಾಣಿ ನೋವಿಗೂ ಸ್ಪಂದಿಸಿ ಮಾನವೀಯತೆ ಮೆರೆದ ಸಾ.ರಾ.ಮಹೇಶ್
ಕೊಡಗು

ವನ್ಯ ಪ್ರಾಣಿ ನೋವಿಗೂ ಸ್ಪಂದಿಸಿ ಮಾನವೀಯತೆ ಮೆರೆದ ಸಾ.ರಾ.ಮಹೇಶ್

August 4, 2018

ಮಡಿಕೇರಿ: ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಿಂದ ಗಂಭೀರ ಗಾಯ ಗೊಂಡಿದ್ದ ಜಿಂಕೆಗೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಅಧಿಕಾರಿಗಳ ಸಭೆ ನಡೆಸಲು ಸಚಿವ ಸಾ.ರಾ. ಮಹೇಶ್ ಮಡಿಕೇರಿಗೆ ಆಗಮಿಸುತ್ತಿದ್ದರು. ಕುಶಾಲನಗರ ಮಾರ್ಗವಾಗಿ ಮಡಿಕೇರಿ ಬರುವ ಸಂದರ್ಭ ಆನೆಕಾಡು ರಕ್ಷಿತಾರಣ್ಯ ಬಳಿ ತಮಿಳುನಾಡು ಮೂಲದ ಪ್ರವಾಸಿ ವಾಹನವೊಂದು ರಸ್ತೆ ದಾಟುತ್ತಿದ್ದ…

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ
ಕೊಡಗು

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ

August 2, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ರಾಜ್ಯ ಪ್ರವಾಸೋದ್ಯಮ ಮತ್ತು ರೇಷ್ಮೆ ಖಾತೆಯ ಸಚಿವ ಸಾ.ರಾ. ಮಹೇಶ್‍ಅವರನ್ನು ಜೆಡಿಎಸ್‍ನ ಮುಖಂಡ ರಾದ ಮೇರಿಯಂಡ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಭೇಟಿ ಮಾಡಿ ಶುಭ ಕೋರಿದರು. ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆ ಬೆಂಗಳೂರಿ ನಲ್ಲಿರುವ ಸಚಿವರ ಅಧಿಕೃತ ನಿವಾಸಕ್ಕೆ ತೆರಳಿದ ಕೊಡಗು ಜಿಲ್ಲಾ ಜಾತ್ಯತೀತಾ ಜನತಾದಳದ ಮುಖಂಡರ ತಂಡ ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ 100…

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್
ಮೈಸೂರು

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್

July 27, 2018

ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾದ ಜಿ.ಟಿ.ದೇವೇಗೌಡ ಅವರು ಉನ್ನತ ಶಿಕ್ಷಣ ಸಚಿವ ಖಾತೆ ವಹಿಸಿಕೊಳ್ಳಲು ಆರಂಭದಲ್ಲಿ ಹಿಂಜರಿದಿದ್ದರು. ಆದರೆ ಇದೀಗ ಉತ್ತಮವಾಗಿ ಖಾತೆ ನಿಭಾಯಿಸುತ್ತಿದ್ದು,…

`ಡಿಸ್ನಿಲ್ಯಾಂಡ್’ ಮಾದರಿ ಮನರಂಜನಾ ಪಾರ್ಕ್ ನಿರ್ಮಾಣ
ಮಂಡ್ಯ

`ಡಿಸ್ನಿಲ್ಯಾಂಡ್’ ಮಾದರಿ ಮನರಂಜನಾ ಪಾರ್ಕ್ ನಿರ್ಮಾಣ

July 26, 2018

ಮಂಡ್ಯ:  ವಿಶ್ವವಿಖ್ಯಾತ ಕೆಆರ್‌ಎಸ್‌ನಲ್ಲಿ ‘ಡಿಸ್ನಿ ಲ್ಯಾಂಡ್’ ಮಾದರಿ ಮನರಂಜನಾ ಪಾರ್ಕ್ ನಿರ್ಮಿಸಲು ಸರ್ಕಾರ ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳೊಂದಿಗೆ ಮಂಗಳವಾರ ಕೆಆರ್‌ಎಸ್‌ಗೆ ಭೇಟಿ ಪರಿಶೀಲನೆ ನಡೆಸಿದರು. ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿ ಯಲ್ಲೇ ಕೆಆರ್‌ಎಸ್‌ ಬೃಂದಾವನವನ್ನು ಅಭಿವೃದ್ಧಿಪಡಿಸಲು ಬಜೆಟ್‍ನಲ್ಲಿ ಘೋಷಣೆ ಯಾಗಿದೆ, ಇದಕ್ಕಾಗಿ 5 ಕೋಟಿ ರೂ. ಗಳನ್ನೂ ಸಹ ಘೋಷಣೆ ಮಾಡಲಾಗಿದೆ, ಈ ಹಿನ್ನೆಲೆಯಲ್ಲಿ ಯೋಜನೆ ಜಾರಿಗೊಳಿಸಲು ಸಿದ್ದತೆ ನಡೆದಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಚಿವರು ಸುದ್ದಿಗಾರರಿಗೆ ತಿಳಿಸಿದರು. ನೀಲನಕ್ಷೆ ತಯಾರಿಗೆ…

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ
ಮೈಸೂರು

ರಾಜ್ಯವೆಲ್ಲಾ ಸುತ್ತಿದರು ಕ್ಷೇತ್ರದ ಜನರ ಸೇವೆ ಮಾಡಲು ಮರೆಯಲ್ಲ

July 22, 2018

ಮೈಸೂರು:  ನಮ್ಮಲ್ಲಿ ಒಡಕಿಲ್ಲ, ಒಂದೇ ಮನಸ್ಸಿನಿಂದ ಜನರ ಸೇವೆಯನ್ನು ಮಾಡುತ್ತಿದ್ದೇವೆ. ನಾನು ಕರ್ನಾ ಟಕವನ್ನೆಲ್ಲಾ ಸುತ್ತಿದರೂ ಕ್ಷೇತ್ರದ ಜನರ ಸೇವೆಗೆ ಆದ್ಯತೆ ನೀಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ವಿಜಯನಗರ 3ನೇಹಂತದಲ್ಲಿರುವ ಸಂಗಮ ವೃತ್ತದಲ್ಲಿ ವಿಜಯಗರ ಒಕ್ಕಲಿಗರ ವೇದಿಕೆ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ, ಗಣ್ಯರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಜಯನಗರ ಮೂರನೇ ಹಂತದ ಸಮಸ್ಯೆಗಳು ಗೊತ್ತಿದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು,…

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ
ಮೈಸೂರು

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾ.ರಾ.ಮಹೇಶ್-ಸಂದೇಶ್ ನಾಗರಾಜ್ ಮಾತಿನ ಚಕಮಕಿ

July 13, 2018

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರ ಹಾಜರಾತಿಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ. ಶಾಸಕಾಂಗ ಪಕ್ಷದ ಅಂತಿಮ ಕ್ಷಣದಲ್ಲಿ ಸಾ.ರಾ. ಮಹೇಶ್ ಮಾತನಾಡುತ್ತಾ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಸಂದೇಶ್ ನಾಗರಾಜ್ ಅವರನ್ನು ಸಭೆಯಿಂದ ಹೊರ ಹಾಕುವಂತೆ ಹೇಳಿದರು. ಅವರಿಗೆ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಅವರು ಬೆಂಬಲಿಸಿದರು. ಈ…

1 2 3 4 5
Translate »