Tag: Sudha Murthy

ಡಾ.ಸುಧಾಮೂರ್ತಿಗೆ ‘ಕನ್ನಡ ರತ್ನ’ ಪ್ರಶಸ್ತಿ
ಮೈಸೂರು

ಡಾ.ಸುಧಾಮೂರ್ತಿಗೆ ‘ಕನ್ನಡ ರತ್ನ’ ಪ್ರಶಸ್ತಿ

October 21, 2019

ಬೆಂಗಳೂರು, ಅ.20- ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿ ಗರು ನೀಡುವ ‘ಕನ್ನಡ ರತ್ನ’ ಪ್ರಶಸ್ತಿಗೆ ಈ ವರ್ಷ ಇನ್ಫೋಸಿಸ್ ಫೌಂಡೇ ಶನ್ ಮುಖ್ಯಸ್ಥೆ ಸುಧಾಮೂರ್ತಿ ಆಯ್ಕೆ ಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದುಬೈ ಕನ್ನಡಿಗರ ಮುಖ್ಯ ಸಂಚಾಲಕ ಮಲ್ಲಿಕಾರ್ಜುನಗೌಡ, ಕರ್ನಾಟಕದ ನಾಡಹಬ್ಬ 64ನೇ ‘ಕನ್ನಡ ರಾಜ್ಯೋತ್ಸವ’ ವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 8 ರಂದು ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿದ್ದು ಈ ಬಾರಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ‘ಕನ್ನಡ ರತ್ನ’…

ಪ್ರವಾಸಿ ತಾಣವಾಗಿ ಹೆಬ್ಬಾಳ ಕೆರೆ: ಸಚಿವ ಜಿಟಿಡಿ ಭರವಸೆ
ಮೈಸೂರು

ಪ್ರವಾಸಿ ತಾಣವಾಗಿ ಹೆಬ್ಬಾಳ ಕೆರೆ: ಸಚಿವ ಜಿಟಿಡಿ ಭರವಸೆ

October 16, 2018

ಮೈಸೂರು:  ಮೈಸೂರು ಹೆಬ್ಬಾಳ ಕೆರೆ ಸದ್ಯದಲ್ಲೇ ಮೈಸೂರಿನ ಮತ್ತೊಂದು ಪ್ರಮುಖ ಪ್ರವಾಸಿ ತಾಣವಾಗಲಿದೆ. 40 ಎಕರೆ ವಿಸ್ತಾರವಾದ, ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹಗೊಳ್ಳುವ ಹಸಿರು ವಲಯ. ನಗರದ ಪ್ರವಾಸೋದ್ಯಮ ಸ್ಥಳಗಳ ಪಟ್ಟಿಗೆ ಸೇರ್ಪಡೆ ಯಾಗುವ ಕಾಲ ದೂರವಿಲ್ಲ. ರಾಜ್ಯ ಸರ್ಕಾರ ಮತ್ತು ಇನ್ಫೋಸಿಸ್ ಫೌಂಡೇಷನ್ ಜಂಟಿಯಾಗಿ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿಪಡಿಸಲಿವೆ. ಈಗಾಗಲೇ ಫೌಂಡೇಷನ್ ಕೋಟ್ಯಾಂತರ ರೂ. ಖರ್ಚು ಮಾಡಿ ಹೆಬ್ಬಾಳ ಕೆರೆಯನ್ನು ನವೀಕರಿಸಿದೆ. ಆದರೆ ಕೆರೆಗೆ ಕೈಗಾರಿಕೆಗಳಿಂದ ಹರಿದು ಬರುತ್ತಿರುವ ಕೊಳಚೆ ನೀರನ್ನು ತಡೆದು, ಪ್ರವಾಸಿ ತಾಣವಾಗಿ…

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಂದ ಹುತಾತ್ಮ ಆರು ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು
ಮೈಸೂರು

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಂದ ಹುತಾತ್ಮ ಆರು ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು

October 16, 2018

ಮೈಸೂರು:  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರ ಕುಟುಂಬಕ್ಕೆ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ತಲಾ 10 ಲಕ್ಷ ರೂ. ನೆರವು ನೀಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು ಹೆಚ್.ಡಿ.ಕೋಟೆ ತಾಲೂಕಿನ ಮಹೇಶ್, ಮೈಸೂರಿನ ರಮೇಶ್, ಹಾಸನದ ನಾಗೇಶ್, ಯೋಗಾನಂದ್, ಸಂದೀಪ್ ಕುಮಾರ್ ಹಾಗೂ ಸಾಗರ್ ಅವರ ಕುಟುಂಬ ಸದಸ್ಯರಿಗೆ ತಲಾ 10 ಲಕ್ಷ ರೂ.ಗಳ ಚೆಕ್ ವಿತರಿಸಿದರು. ನಂತರ ಡಾ.ಸುಧಾಮೂರ್ತಿ ಅವರು ಮಾತನಾಡಿ, ಹೋದ ಪ್ರಾಣವನ್ನು ನಮ್ಮಿಂದ…

ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ
ಮೈಸೂರು

ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ

October 12, 2018

ಚುಂಚನಕಟ್ಟೆ: ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಗುರುವಾರ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಇಲ್ಲಿನ ಐತಿಹ್ಯ ಮತ್ತು ವಿಶೇಷತೆ ಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, ಗ್ರಾಮಸ್ಥರು ಮತ್ತು ಭಕ್ತಾಧಿಗಳ ಜತೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಜೀವನ ಶೈಲಿಯ ಬಗ್ಗೆ ಕುಶಲೋಪರಿ ವಿಚಾರಿಸಿದರು. ಬುಧವಾರ ನಾಡಹಬ್ಬ ದಸರಾ ಉದ್ಘಾಟನೆ ನೆರವೇರಿಸಿದ ಸುಧಾಮೂರ್ತಿ ಅವರು ಚುಂಚನಕಟ್ಟೆಗೆ ಆಗಮಿಸಿದ್ದು, ಅವರ ಸರಳತೆ ಮತ್ತು ಸಾರ್ವಜನಿಕರ ಮೇಲಿನ…

ಕೊಡಗು ನೆರೆ ಸಂತ್ರಸ್ತರಿಗೆ ಡಾ. ಸುಧಾಮೂರ್ತಿ 25 ಕೋಟಿ ರೂ. ನೆರವು ಘೋಷಣೆ
ಮೈಸೂರು

ಕೊಡಗು ನೆರೆ ಸಂತ್ರಸ್ತರಿಗೆ ಡಾ. ಸುಧಾಮೂರ್ತಿ 25 ಕೋಟಿ ರೂ. ನೆರವು ಘೋಷಣೆ

October 11, 2018

ಮೈಸೂರು: ಪ್ರಕೃತಿ ವಿಕೋಪದಿಂದ ನಿರಾಶ್ರಿತರಾಗಿರುವ ಕೊಡಗಿನವರಿಗೆ ಮನೆ ನಿರ್ಮಿಸಿಕೊಡಲು ತಾವು 25 ಕೋಟಿ ರೂ. ನೆರವು ನೀಡು ವುದಾಗಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾ ಟಿಸಿ, ಮಾತನಾಡುತ್ತಿದ್ದ ಅವರು, ನೆರೆ ಪೀಡಿತ ಕೊಡಗಿನ ಜನರು ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ತೊಂದರೆಗೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ಅಲ್ಲಿನ ಜನರಿಗೆ ಪುನರ್ವಸತಿ ಕಲ್ಪಿಸುತ್ತಿದೆ. ಆ ಕಾರ್ಯಕ್ಕೆ ನಮ್ಮ ಸಂಸ್ಥೆಯೂ ಕೈಜೋಡಿಸುವುದು ನಮ್ಮ…

ಸುಧಾಮೂರ್ತಿ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ
ಮೈಸೂರು, ಮೈಸೂರು ದಸರಾ

ಸುಧಾಮೂರ್ತಿ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆತ್ಮೀಯ ಸ್ವಾಗತ

October 10, 2018

ಮೈಸೂರು:  ‘ಎನಿತು ಜನರಿಗೆ, ಎನಿತು ಜನ್ಮಗಳಿಗೆ, ನಾನು ಎನಿತು ಋಣಿಯೋ, ಹಾಗೆ ನೋಡಿದರೆ ಈ ಜನ್ಮವೆಂಬುದು ಒಂದು ಋಣದ ಗಣಿಯೋ….’ ಹೀಗೆ ಕನ್ನಡದ ಜನತೆಗೆ ನಾನು ಋಣಿಯಾಗಿದ್ದೇನೆ ಎಂದು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿರುವ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಸಂತಸ ವ್ಯಕ್ತಪಡಿಸಿದ್ದಾರೆ. ದಸರಾ ಉದ್ಘಾಟನೆಗಾಗಿ ಮಂಗಳವಾರ ಮೈಸೂರಿಗೆ ಆಗಮಿಸಿದ ಶ್ರೀಮತಿ ಸುಧಾಮೂರ್ತಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸುಧಾಮೂರ್ತಿ ಅವರು,…

ನಾಡಹಬ್ಬ ದಸರಾ ಉದ್ಘಾಟನೆ ಅವಕಾಶ ದೊರೆತಿದ್ದು ತರಗತಿಯಲ್ಲಿ ರ‍್ಯಾಂಕ್ ಪಡೆದಷ್ಟು ಸಂತಸ ತಂದಿದೆ
ಮೈಸೂರು

ನಾಡಹಬ್ಬ ದಸರಾ ಉದ್ಘಾಟನೆ ಅವಕಾಶ ದೊರೆತಿದ್ದು ತರಗತಿಯಲ್ಲಿ ರ‍್ಯಾಂಕ್ ಪಡೆದಷ್ಟು ಸಂತಸ ತಂದಿದೆ

October 7, 2018

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ತಮಗೆ ಅವಕಾಶ ದೊರೆತಿರುವುದು ತರಗತಿಯಲ್ಲಿ ಮೊದಲನೇ ರ‍್ಯಾಂಕ್ ಪಡೆದಷ್ಟು ಸಂತಸವಾಗಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಣಮೂರ್ತಿ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು ಪ್ರೆಸ್‍ಕ್ಲಬ್ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಡಹಬ್ಬದ ಉದ್ಘಾಟನೆ ಅವಕಾಶ ದೊರೆಯುತ್ತದೆ ಎಂದು ಕನಸಿನಲ್ಲೂ ಕಂಡಿರಲಿಲ್ಲ ಎಂದರು. ದೇವರ ದಯೆಯಿಂದ ದಸರಾ ಉದ್ಘಾಟನೆ ಭಾಗ್ಯ ದೊರೆತಿದೆ, ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವುದು ಮತ್ತು ದಸರಾ ಉದ್ಘಾಟನೆ ಅವಕಾಶ ಎರಡೂ ಹೆಮ್ಮೆಯ ವಿಷಯ ಎಂದು ಬಣ್ಣಿಸಿದರು. ಪ್ರತಿ ರಾಜ್ಯಕ್ಕೆ…

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು
ಮೈಸೂರು

ಪೊಲೀಸ್ ಠಾಣೆ, ವಸತಿ ಗೃಹ ನಿರ್ಮಾಣಕ್ಕೆ ಇನ್ಫೋಸಿಸ್ ನೆರವು

July 17, 2018

ಬೆಂಗಳೂರು: ಅಗತ್ಯವಿರುವ ಪೊಲೀಸ್ ಠಾಣೆ ಹಾಗೂ ವಸತಿ ಗೃಹಗಳನ್ನು ನಿರ್ಮಿಸಿಕೊಡಲು ಇನ್ಫೋಸಿಸ್ ಸಂಸ್ಥೆ ಮುಂದಾಗಿದೆ. ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ, ಗೃಹ ಇಲಾಖೆ ಹೊಣೆ ಹೊತ್ತ ಡಾ. ಜಿ. ಪರಮೇಶ್ವರ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೂ ತಮ್ಮ ಪ್ರತಿಷ್ಠಾನದಿಂದ ಕೊಡುಗೆ ನೀಡಲು ಸಮ್ಮತಿಸಿದ್ದಾರೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ರಾಜ್ಯಾದ್ಯಂತ 11,000 ಪೊಲೀಸ್ ವಸತಿ ಗೃಹ ನಿರ್ಮಿಸಲಾಗುತ್ತಿದ್ದು, ಇದರಲ್ಲಿ ಈಗಾಗಲೇ 7,000 ವಸತಿ ಗೃಹಗಳು ನಿರ್ಮಾಣದ ಅಂತಿಮ ಹಂತದಲ್ಲಿವೆ….

Translate »