ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.29ರ ವರೆಗೆ ವಿಸ್ತರಿಸಲಾಗಿದೆ. ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯ ಅವರನ್ನು ನ್ಯಾಯಾಧೀಶ ಜಿ.ಬಸವರಾಜು ಅವರ ಮುಂದೆ ಹಾಜರುಪಡಿಸಲಾಯಿತು. ಬಂಧಿತ ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹದಲ್ಲಿ ಇರಿಸಲಾಗಿದ್ದು, ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ…