ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯಭಾಸ್ಕರ್ ಇಂದಿಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ವಿಜಯಭಾಸ್ಕರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಇದಕ್ಕೂ ಮುನ್ನ ಸರ್ಕಾರ ಸೇವಾ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಟಿ.ಎಂ. ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ನೂತನ ಮುಖ್ಯ ಕಾರ್ಯದರ್ಶಿ ಆಯ್ಕೆ ಕುರಿತು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಬಿಡಲಾಗಿತ್ತು. ಆಂಧ್ರ ಪ್ರದೇಶ…