ಮೈಸೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿ ನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ವತಿಯಿಂದ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯು ಬಿರುಕಾಗಿದೆ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ (ವಾಟ್ಸಾಪ್ ) ವದಂತಿಗಳು ಹರಿಯುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇದನ್ನು ಸಾರ್ವಜನಿಕರು ನಂಬದಿರುವಂತೆ ಹಾಗೂ ಯಾವುದೇ ಆತಂಕಗಳಿಗೂ ಒಳಗಾಗುವ ಅಗತ್ಯವಿಲ್ಲ ಎಂದು ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯ ಪಾಲಕ ಇಂಜಿನಿಯರ್ ಕೆ.ಪಿ.ಮಹದೇವಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಈ ಸೇತುವೆಯನ್ನು ಆ.12…