ಡಬ್ಲಿನ್: ಡಬ್ಲಿನ್‍ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ 143 ರನ್‍ಗಳ ಭರ್ಜರಿ ಜಯ ಗಳಿಸಿದೆ. ಎರಡು ಟಿ20 ಪಂದ್ಯಗಳಲ್ಲಿ 2-0 ಯೊಂದಿಗೆ ಸರಣಿಯನ್ನು ತನ್ನದಾಗಿಸಿಕೊಂಡಿತು. ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ನಿಗದಿತ 20 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತು. 214 ರನ್ ಟಾರ್ಗೆಟ್ ಬೆನ್ನತ್ತಿದ ಐರ್ಲೆಂಡ್ 12.3 ಓವರ್‍ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 70 ರನ್ ಕಲೆ ಹಾಕಲಷ್ಟೇ ಶಕ್ತವಾಯಿತು. ಟಾಸ್ ಸೋತು ಬ್ಯಾಟಿಂಗ್‍ಗೆ…