Tag: UoM

ಮೈಸೂರು ವಿವಿಗೆ 54ನೇ ರ್ಯಾಂಕಿಂಗ್ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪಟ್ಟಿ ಬಿಡುಗಡೆ
ಮೈಸೂರು

ಮೈಸೂರು ವಿವಿಗೆ 54ನೇ ರ್ಯಾಂಕಿಂಗ್ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪಟ್ಟಿ ಬಿಡುಗಡೆ

April 9, 2019

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನವದೆಹಲಿಯಲ್ಲಿ ಸೋಮವಾರ ಭಾರತೀಯ ವಿಶ್ವವಿದ್ಯಾನಿಲಯಗಳ 2019ನೇ ಸಾಲಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಮೈಸೂರು ವಿಶ್ವವಿದ್ಯಾನಿಲಯ 54ನೇ ಸ್ಥಾನಕ್ಕೆ ಭಾಜನವಾಗಿದೆ. ಜೊತೆಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆ ಗುಣಮಟ್ಟ ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ನ್ಯಾಷನಲ್ ಇನ್‍ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‍ವರ್ಕ್ ಮೂಲಕ 2016ರಿಂದ ವಿವಿಧ ವಿಭಾಗಗಳಲ್ಲಿ ರ್ಯಾಂಕಿಂಗ್ ಪದ್ಧತಿಯನ್ನು ಜಾರಿಗೊಳಿಸಿದ್ದು, 2017ರಲ್ಲಿ ಮೈಸೂರು…

ವಿವಿಗಳು ಗ್ರಾಮ ದತ್ತು ಪಡೆದು ಸಮಸ್ಯೆಗಳ ಸಂಶೋಧನೆ ನಡೆಸಿ ಪರಿಹಾರ ಕಾಣಬೇಕು
ಮೈಸೂರು

ವಿವಿಗಳು ಗ್ರಾಮ ದತ್ತು ಪಡೆದು ಸಮಸ್ಯೆಗಳ ಸಂಶೋಧನೆ ನಡೆಸಿ ಪರಿಹಾರ ಕಾಣಬೇಕು

March 18, 2019

ಮೈಸೂರು: ವಿವಿಗಳು ಗ್ರಾಮಗಳನ್ನು ದತ್ತು ಪಡೆದು ಅಲ್ಲಿನ ಜನರು ಎದುರಿ ಸುತ್ತಿರುವ ಸಮಸ್ಯೆ ಕುರಿತಂತೆ ವಿದ್ಯಾರ್ಥಿಗಳಿಂದ ಸಂಶೋಧನೆ ನಡೆಸಿ ಅವುಗಳಿಗೆ ಪರಿಹಾರ ಕಂಡು ಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷ ಡಾ.ಅನಿಲ್ ಡಿ.ಸಹಸ್ರಬುಧೆ ಅಬಿಪ್ರಾಯಪಟ್ಟರು. ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಭಾನುವಾರ 99ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು. ವಿಶ್ವ ವಿದ್ಯಾನಿಲಯಗಳು ಹೊಸ ಜ್ಞಾನ, ಅವುಗಳ ಬಳಕೆಯ ಕೇಂದ್ರಗಳಾಗಿರಬೇಕಾಗಿರುವ ಕಾರಣ ವಿವಿಗಳಲ್ಲಿ ಸಂಶೋಧನೆ ಮತ್ತು…

ಮೈಸೂರು ವಿವಿ ವಿದ್ಯಾರ್ಥಿಗಳಿಗೆ ವಿದೇಶಿ ಪ್ರಾಧ್ಯಾಪಕರಿಂದಲೂ ಪಾಠ
ಮೈಸೂರು

ಮೈಸೂರು ವಿವಿ ವಿದ್ಯಾರ್ಥಿಗಳಿಗೆ ವಿದೇಶಿ ಪ್ರಾಧ್ಯಾಪಕರಿಂದಲೂ ಪಾಠ

January 15, 2019

ಮೈಸೂರು: ಮೈಸೂರು ವಿಶ್ವವಿದ್ಯಾ ನಿಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಇನ್ಮುಂದೆ ವಿದೇಶಿ ಪ್ರಾಧ್ಯಾಪಕರಿಂದಲೂ ಪಾಠ-ಪ್ರವಚನ ಮಾಡಿಸಲಾಗುವುದು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್‍ಕುಮಾರ್ ಅವರ ಅಧ್ಯಕ್ಷತೆ ಯಲ್ಲಿ ಕ್ರಾಫರ್ಡ್ ಭವನದಲ್ಲಿ ಇಂದು ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸದಸ್ಯರು, ಮುಂದಿನ ದಿನಗಳಲ್ಲಿ ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾ ನಿಲಯಗಳ ಪ್ರಾಧ್ಯಾಪಕರನ್ನು ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಲು ನಿರ್ಧರಿಸಲಾಯಿತು. ವಿಶ್ವದ ಹಲವು ದೇಶಗಳ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾ ಪಕರನ್ನು ಕರೆಸಿ ಪಾಠ ಪ್ರವಚನ ಮಾಡಿಸುವುದರಿಂದ ಸ್ಥಳೀಯ…

ಅಧ್ಯಾಪಕರ ಬಡ್ತಿ ಸಂಬಂಧ ಮೈಸೂರು ವಿವಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ
ಮೈಸೂರು

ಅಧ್ಯಾಪಕರ ಬಡ್ತಿ ಸಂಬಂಧ ಮೈಸೂರು ವಿವಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ

December 2, 2018

ಮೈಸೂರು: ಮೈಸೂರು ವಿವಿ ಸಹ ಪ್ರಾಧ್ಯಾ ಪಕರಿಗೆ ಪ್ರೊಫೆಸರ್ ಹುದ್ದೆಗೆ ಬಡ್ತಿ ನೀಡದೆ ಸತಾಯಿಸುತ್ತಿರುವ ಮೈಸೂರು ವಿವಿ ಆಡಳಿತ ಮಂಡಳಿ ವಿರುದ್ಧ ಗೌಪ್ಯ ತನಿಖೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಪತ್ರ ವ್ಯವಹಾರ ನಡೆದಿದೆ ಎನ್ನಲಾಗಿದೆ. ಮೈಸೂರು ವಿವಿ ವ್ಯಾಪ್ತಿಯ ಮಹಾರಾಜ ಕಾಲೇಜು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಶ್ವನಾಥ್ ಬಡ್ತಿಯಿಂದ ವಂಚಿತ ರಾದವರು. ಡಾ.ವಿಶ್ವನಾಥ್ ಅವರು ಪ್ರೊಫೆಸರ್ ಹುದ್ದೆಗೆ ಕಳೆದ 10 ವರ್ಷಗಳಿಂದ ಬಡ್ತಿ ನೀಡದ ವಿವಿ ಆಡಳಿತ…

ಬೆಂಗಳೂರಲ್ಲಿ ಸಭೆ ನಡೆಸಿದ ಶೋಧ ಸಮಿತಿ
ಮೈಸೂರು

ಬೆಂಗಳೂರಲ್ಲಿ ಸಭೆ ನಡೆಸಿದ ಶೋಧ ಸಮಿತಿ

November 15, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ನೇಮಕ ಸಂಬಂಧ ಶೋಧನಾ ಸಮಿತಿಯು ಪ್ರಕ್ರಿಯೆಯನ್ನು ತ್ವರಿತಗೊಳಿಸಿದೆ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲ ಯದ ವಿಶ್ರಾಂತ ಕುಲಪತಿ ಪ್ರೊ. ಕೆ.ನಾರಾಯಣಗೌಡರ ನೇತೃತ್ವದ ಶೋಧನಾ ಸಮಿತಿಯ ಸದಸ್ಯರಾದ ಪ್ರೊ. ಬಿ.ಸಿ. ಚಪ್ಪರ್‍ವಾಲ್, ಪ್ರೊ. ಎಂ.ಜಗದೀಶ್‍ಕುಮಾರ್, ಪ್ರೊ. ಎಸ್.ಚಂದ್ರಶೇಖರ್ ಅವರು ಮಂಗಳ ವಾರ ಬೆಂಗಳೂರಿನ ಬಹುಮಹಡಿ ಗಳ ಕಟ್ಟಡದ ಉನ್ನತ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸಭೆ ನಡೆಸಿದರು. ಕುಲಪತಿ ಸ್ಥಾನಕ್ಕೆ ಒಟ್ಟು 82 ಮಂದಿ ಪ್ರಾಧ್ಯಾಪಕರು ಅರ್ಜಿ ಸಲ್ಲಿಸಿದ್ದು, ಆ ಪೈಕಿ ಮೈಸೂರು ವಿಶ್ವವಿದ್ಯಾನಿಲಯದ ಪ್ರೊ….

ಸೂರು ವಿವಿ ಬೋಧಕೇತರ ಸಿಬ್ಬಂದಿ ಅಕ್ರಮ ನೇಮಕಾತಿ ವಿರುದ್ಧ ದಸಂಸ ಅನಿರ್ದಿಷ್ಟಾವಧಿ ಪ್ರತಿಭಟನೆ
ಮೈಸೂರು

ಸೂರು ವಿವಿ ಬೋಧಕೇತರ ಸಿಬ್ಬಂದಿ ಅಕ್ರಮ ನೇಮಕಾತಿ ವಿರುದ್ಧ ದಸಂಸ ಅನಿರ್ದಿಷ್ಟಾವಧಿ ಪ್ರತಿಭಟನೆ

October 5, 2018

ಮೈಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 124 ಬೋಧಕೇತರ ಸಿಬ್ಬಂದಿ ಅಕ್ರಮ ನೇಮಕಕ್ಕೆ ಸಂಬಂಧಿಸಿ ದಂತೆ ರಾಜ್ಯಪಾಲರ ಆದೇಶದನ್ವಯ ತಪ್ಪಿತ ಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖ ಲಿಸಬೇಕು, ವಿವಿ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಗುರುವಾರ ಅನಿರ್ದಿಷ್ಟಾ ವಧಿ ಪ್ರತಿಭಟನೆ ಆರಂಭಿಸಿದವು. ಮೈಸೂರು ವಿವಿಯ ಕ್ರಾಫರ್ಡ್ ಹಾಲ್ ದ್ವಾರದ ಬಳಿ ಪ್ರತಿಭಟನೆ ಆರಂಭಿಸಿರುವ ಪ್ರತಿಭಟನಾಕಾರರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ಹಾಗೂ ರಾಷ್ಟ್ರ ಕವಿ ಕುವೆಂಪು ಅವರ…

ಮೈಸೂರು ವಿವಿ ಅಕ್ರಮಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ
ಮೈಸೂರು

ಮೈಸೂರು ವಿವಿ ಅಕ್ರಮಗಳ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ

October 4, 2018

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಕ್ರಮಗಳ ಸರಣಿಯೇ ನಡೆದಿದ್ದು, ಅದರ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಹಾಗೂ ದಲಿತ ಸಂಘರ್ಷ ಸಮಿತಿ ಜಂಟಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್, ವಿದ್ಯಾರ್ಥಿಗಳ ಹೋರಾಟ ಹತ್ತಿಕ್ಕಲು ಪೊಲೀಸ್ ದರ್ಪ ಬಳಸಲಾಗಿದೆ. ಈ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿದರು. ಖಾಯಂ ಕುಲಪತಿಗಳೇ ಇಲ್ಲದಿರುವುದ ರಿಂದ ವಿವಿಯಲ್ಲಿ ಅರಾಜಕತೆ ಉಂಟಾಗಿದೆ ಎಂದು…

ಮೈಸೂರು ವಿವಿ ಹಂಗಾಮಿ ಕುಲಪತಿಯಾಗಿ ಡಾ.ಆಯಿಷಾ ಎಂ.ಷರೀಫ್ ಅಧಿಕಾರ ಸ್ವೀಕಾರ
ಮೈಸೂರು

ಮೈಸೂರು ವಿವಿ ಹಂಗಾಮಿ ಕುಲಪತಿಯಾಗಿ ಡಾ.ಆಯಿಷಾ ಎಂ.ಷರೀಫ್ ಅಧಿಕಾರ ಸ್ವೀಕಾರ

September 23, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 6ನೇ ಹಂಗಾಮಿ ಕುಲಪತಿಗಳಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ಆಯಿಷಾ ಎಂ.ಷರೀಫ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಕ್ರಾಫರ್ಡ್ ಭವನದಲ್ಲಿ ನಿರ್ಗಮಿತ ಹಂಗಾಮಿ ಕುಲಪತಿ ಪ್ರೊ.ಟಿ.ಕೆ.ಉಮೇಶ್ ಅವರು ಡಾ.ಆಯಿಷಾ ಎಂ.ಷರೀಫ್ ಅವರಿಗೆ ಅಧಿಕಾರ ವಹಿಸಿಕೊಟ್ಟರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಆಯಿಷಾ ಅವರು, ತಾವು ವಿಶ್ವವಿದ್ಯಾನಿಲಯ ದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸಿ ಫಲಿತಾಂಶ ಉತ್ತಮ ಪಡಿಸುವ ಮೂಲಕ ಸಂಸ್ಥೆಯ ಘನತೆ ಎತ್ತಿಹಿಡಿಯುವುದಾಗಿ ತಿಳಿಸಿದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು, ಅನ ಧಿಕೃತವಾಗಿ ವಾಸವಿರುವವರನ್ನು…

ಮೈಸೂರು ವಿವಿ ಎನ್‍ಎಸ್‍ಎಸ್ ಘಟಕ ಸುವರ್ಣ ಸಂಭ್ರಮಾಚರಣೆ
ಮೈಸೂರು

ಮೈಸೂರು ವಿವಿ ಎನ್‍ಎಸ್‍ಎಸ್ ಘಟಕ ಸುವರ್ಣ ಸಂಭ್ರಮಾಚರಣೆ

September 23, 2018

ನಾಳೆಯಿಂದ ವರ್ಷವಿಡೀ ವಿವಿಧ ಕಾರ್ಯಕ್ರಮ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) 50ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ `ಸುವರ್ಣ ಸಂಭ್ರಮಾಚರಣೆ’ ಶೀರ್ಷಿಕೆಯಡಿ ವರ್ಷ ಕಾಲ ವಿವಿಧ ಕಾರ್ಯ ಕ್ರಮಗಳನ್ನು ಸಂಘಟಿಸುತ್ತಿದ್ದು, ಇದರ ಉದ್ಘಾಟನಾ ಸಮಾರಂಭ ಸೆ.24ರಂದು ನಡೆಯಲಿದೆ ಎಂದು ಮೈಸೂರು ವಿವಿಯ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣ ದಲ್ಲಿ ಸುವರ್ಣ ಸಂಭ್ರಮಾಚರಣೆ ಉದ್ಘಾಟನೆಯೊಂದಿಗೆ…

ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕ ಅನಿರ್ಧಿಷ್ಟಾವಧಿ ಧರಣಿ ಮುಂದುವರಿಕೆ
ಮೈಸೂರು

ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕ ಅನಿರ್ಧಿಷ್ಟಾವಧಿ ಧರಣಿ ಮುಂದುವರಿಕೆ

September 9, 2018

ಮೈಸೂರು ನಗರ ಪಾಲಿಕೆ ಪೌರ ಕಾರ್ಮಿಕರ ಬೆಂಬಲ ಮೈಸೂರು: ಕನಿಷ್ಠ ಕೂಲಿ, ಇಎಸ್‍ಐ, ಪಿಎಫ್ ಸೌಲಭ್ಯ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಐದು ದಿನಗಳಿಂದ ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಪೌರಕಾರ್ಮಿಕರು ನಡೆಸುತ್ತಿರುವ ಧರಣಿಯಲ್ಲಿ ಶನಿವಾರ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಮುಖಂಡರು ಪಾಲ್ಗೊಂಡು ಬೆಂಬಲ ಸೂಚಿಸಿದರಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದ ಬಳಿ ಅಹೋರಾತ್ರಿ ಧರಣಿ ಮುಂದುವರೆಸಿದ್ದ ವಿವಿಯ ಪೌರಕಾರ್ಮಿಕರು ವಿವಿಧ ಆಡಳಿತ ಮಂಡಳಿಯ ವಿರುದ್ದ…

1 2
Translate »