ಬೆಂಗಳೂರು: ರಾಷ್ಟ್ರದ ಏಕತೆ ಮತ್ತು ಸಮಗ್ರತೆ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ ಕರ್ನಾಟಕದ ಪ್ರಜ್ಞಾವಂತ ಮತದಾರರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಮೇ 29ರಂದು ರಾಜ್ಯದ 61 ಸ್ಥಳೀಯ ಸಂಸ್ಥೆ ಗಳಿಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕಾಂಗ್ರೆಸ್ ಮೊದಲ ಸಾಲಿನಲ್ಲಿದ್ದರೆ, ನಂತರದ ಸ್ಥಾನವನ್ನು ಬಿಜೆಪಿ ಮತ್ತು ಜೆಡಿಎಸ್ ಪಡೆದುಕೊಂಡಿವೆ. 61 ನಗರ ಸ್ಥಳೀಯ ಸಂಸ್ಥೆಗಳು ನಗರಸಭೆಯ 248, ಪಟ್ಟಣ ಪಂಚಾಯ್ತಿಯ 330…