ಹಾಸನ: ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಹಾಸನಾಂಬ ಕಲಾಭವನದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಮಹತ್ವ ಇದೆ. ಅದನ್ನು ಗೌರವಿಸಬೇಕು ಎಂದರು. ವಿಶ್ವಕರ್ಮ ಜನಾಂಗವಿಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ಏಕೆಂದರೆ ಅಭಿವೃದ್ಧಿಗೆ ಪೂರಕವಾದ ವಿಶ್ವಕರ್ಮ ಸಮಾಜದ ಕುಲ ಕಸುಬುಗಳಿವೆ. ಆದರೆ ಈ ಸಮುದಾಯ ತಮ್ಮ…
ನಾಳೆ ಚಾಮರಾಜನಗರದಲ್ಲಿ ವಿಶ್ವಕರ್ಮ ಜಯಂತಿ
September 21, 2018ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆ.22ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟ ರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಉಪಸ್ಥಿತಿ ವಹಿಸುವರು. ಸಂಸದ ಆರ್. ಧ್ರುವನಾರಾಯಣ…
ಬೇರೆಯವರಿಗೋಸ್ಕರವೇ ಬದುಕು ಮುಡಿಪಾಗಿಟ್ಟು ದುಡಿಯುವ ಶ್ರಮಜೀವಿ ಸಮುದಾಯ ವಿಶ್ವಕರ್ಮ
September 18, 2018ಮೈಸೂರು: ವಿಗ್ರಹಗಳ ಕೆತ್ತನೆ, ಮರಗೆಲಸ, ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ ಹೀಗೆ ಮನುಷ್ಯ ಜೀವನದಲ್ಲಿ ಅಗತ್ಯವಿರುವುದೆಲ್ಲವೂ ವಿಶ್ವಕರ್ಮ ಸಮುದಾಯದ ಕೊಡುಗೆ. ದೈಹಿಕ ಶ್ರಮ ವಹಿಸಿ ದುಡಿಯುವ ಸಮುದಾಯವೆಂದರೆ ಅದು ವಿಶ್ವಕರ್ಮರು ಮಾತ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಜಂಟಿಯಾಗಿ ಆಯೋಜಿ ಸಿದ್ದ ಜಿಲ್ಲಾ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ…
ನಾಳೆ ವಿಶ್ವಕರ್ಮ ಜಯಂತ್ಯೋತ್ಸವ ಮೆರವಣಿಗೆ
September 16, 2018ಮೈಸೂರು: ಮೈಸೂರು ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ, ಜಿಲ್ಲಾಡಳಿತದ ಸಹಯೋಗದಲ್ಲಿ ಸೆ.17ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನಲ್ಲಿ 3ನೇ ವರ್ಷದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಏರ್ಪಡಿಸಿದ್ದು, ಇದರ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ, ಮಧ್ಯಾಹ್ನ 12.30 ಗಂಟೆಗೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಹುಚ್ಚಪ್ಪಾಚಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೈಸೂರಿನ ಇರ್ವಿನ್…