ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ `ವಿಶ್ವಕರ್ಮರ ನಡೆ ಜೆಡಿಎಸ್ ಕಡೆ’ ಶೀರ್ಷಿಕೆಯಡಿ ನಡೆದ ಸಮಾವೇಶ ಯಶಸ್ವಿಯಾಗಿದ್ದು, ಕ್ಷೇತ್ರದ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರಿಗೆ ಸಮುದಾಯದಿಂದ ಬೆಂಬಲ ಘೋಷಣೆ ಮಾಡಲಾಗಿದೆ. ಅದೇ ರೀತಿ ರಾಜ್ಯ ಮಟ್ಟದಲ್ಲಿ ಸಮುದಾಯದ ಬೆಂಬಲವನ್ನು ಜೆಡಿಎಸ್‍ಗೆ ನೀಡುವುದಾಗಿ ಘೋಷಣೆ ಮಾಡಲು ಈ ತಿಂಗಳ ಕೊನೆ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆ…