ಕೊಳ್ಳೇಗಾಲ: ತಾಲೂಕಿನ ಶಿವನ ಸಮುದ್ರಕ್ಕೆ ಸಂಪರ್ಕ ಕಲ್ಪಿಸಲು 200 ವರ್ಷಗಳ ಹಿಂದೆ ಬ್ರಿಟೀಷರ ಕಾಲದಲ್ಲಿ ನಿರ್ಮಿಸಲಾಗಿದ್ದ ವೆಸ್ಲಿ ಸೇತುವೆ ಸೋಮವಾರ ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಮುಂಗಾರು ಹಂಗಾಮಿನಡಿ ರಾಜ್ಯ ದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳು ಭರ್ತಿ ಯಾಗುತ್ತಿದೆ. ಜೊತೆಗೆ, ನದಿಗಳು ಮೈದುಂಬಿ ಹರಿಯುತ್ತಿದೆ. ಕೆಆರ್‌ಎಸ್ ಜಲಾಶಯ ಈಗಾಗಲೇ ಗರಿಷ್ಠ ಮಟ್ಟ ತಲುಪಿದ್ದು, ಜಲಾ ಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಸೋಮವಾರ ಕೆಆರ್‌ಎಸ್ ಜಲಾಶಯ ದಿಂದ ಕಾವೇರಿ ನದಿಗೆ ಅಪಾರ ಪ್ರಮಾಣದ…