ಸ್ವಚ್ಛತಾ ರಾಯಭಾರಿ ರಾಜಮಾತೆ ಪ್ರಮೋದಾದೇವಿ ಒಡೆಯರ್‍ಗೆ ಪಾಲಿಕೆ ಅಗೌರವ ಮೈಸೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ನಿಷೇಧ ಕುರಿತು ಅರಿವು ಮೂಡಿಸಲು ಮೈಸೂರು ನಗರಪಾಲಿಕೆ ಮೈಸೂರಿನ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಬರೀ ಕಾಟಾಚಾರಕ್ಕೆ ಎಂಬಂತೆ ನಡೆಯಿತು. ಸ್ವಚ್ಛತಾ ರಾಯಭಾರಿಯಾಗಿರುವ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ ಎಂದು ಪಾಲಿಕೆ ಅಧಿಕಾರಿಗಳು ಪ್ರಕಟಣೆ ನೀಡಿದ್ದರು. ಆದರೆ ನಿಜಸ್ಥಿತಿ ಎಂದರೆ ಪಾಲಿಕೆ ಅಧಿಕಾರಿಗಳು…
ಪರಿಸರ ದಿನಾಚರಣೆ ಪೂರ್ವಭಾವಿ ಸಭೆ: ಪ್ಲಾಸ್ಟಿಕ್ ಬಳಕೆ ನಿಷೇಧ, ಪರಿಸರ ಸಂರಕ್ಷಣೆ ಇಂದಿನ ತುರ್ತು ಅನಿವಾರ್ಯ
May 31, 2018ಮೈಸೂರು: ಪರಿಸರ ಸಂರಕ್ಷಣೆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಜನಜಾಗೃತಿ ಮೂಡಿಸುವುದು ಅಗತ್ಯವಿದ್ದು, ಈ ಬಗ್ಗೆ ಜೂನ್ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಪರಿಸರ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಪರಿಸರ ಜಾಗೃತಿಗೆ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಸೂಚನೆ ನೀಡಿದರು. ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆ ಬಗ್ಗೆ ವಿದ್ಯಾರ್ಥಿಗಳ ಮೂಲಕ…
ಜೂ.2ರಂದು ಚಿತ್ರಕಲಾ, ಪ್ರಬಂಧ ಸ್ಪರ್ಧೆ
May 31, 2018ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 2ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕುಕ್ಕರಹಳ್ಳಿ ಕೆರೆ ಉದ್ಯಾನವನದ ಆವರಣದಲ್ಲಿ ಶಾಲಾ ಮಕ್ಕಳಿಗೆ ಪರಿಸರ ಸಂರಕ್ಷಣೆ ವಿಷಯ ಕುರಿತು ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಸ್ಪರ್ಧೆಯ ವಿಷಯ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯಿರಿಯಾಗಿರುತ್ತದೆ. ಚಿತ್ರಕಲಾ ಸ್ಪರ್ಧೆಯಲ್ಲಿ 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದು ಮೈಸೂರು ನಗರ…