ಮೈಸೂರು: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಕಾರ್ಡಿ ಯಾಲಜಿ ಸೊಸೈಟಿ ಆಫ್ ಇಂಡಿಯಾದ ಮೈಸೂರು ಶಾಖೆ ವತಿಯಿಂದ ಅ.7ರಂದು ಬೆಳಿಗ್ಗೆ 8 ಗಂಟೆಗೆ ಕಾಲ್ನಡಿಗೆ ಜಾಗೃತಿ ಜಾಥಾ ಹಮ್ಮಿ ಕೊಳ್ಳಲಾಗಿದೆ ಎಂದು ಶಾಖೆಯ ಕಾರ್ಯದರ್ಶಿ ಡಾ.ಎಂ.ಕೆ.ಎಸ್.ರಾಜಿತ್ ಮೈಸೂರು ಜಿಲ್ಲಾ ಪತ್ರ ಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಶ್ವದ ನಂ.1 ಕಾಯಿಲೆ ಎನಿಸಿರುವ ಹೃದಯ ಸಂಬಂಧಿ ಕಾಯಿಲೆಯಿಂದ ಪ್ರತಿ ವರ್ಷ 1.5 ಕೋಟಿ ಜನರು ಬಳಲುತ್ತಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲೆಂದೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾಥಾ ಜೆ.ಕೆ.ಮೈದಾನದಿಂದ…