ಮೈಸೂರು: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಂತೆ ಬಂಡೀಪುರದ ಮಂಗಲ ಗ್ರಾಮದಲ್ಲಿ ನಡೆದ ಎರಡು ದಿನಗಳ ಪರಿಸರ ಅಧ್ಯಯನ ಶಿಬಿರದಲ್ಲಿ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಗಂಗೋತ್ರಿ ಘಟಕದ ವಿದ್ಯಾರ್ಥಿಗಳಿಗಾಗಿ ವನ್ಯಸಂಪತ್ತಿನ ಸಂರಕ್ಷಣೆಯ ಮಹತ್ವವನ್ನು ಅರಿತುಕೊಂಡರು. ವೈಲ್ಡ್‍ಲೈಫ್ ಕನ್ರ್ಸರ್ವೇಷನ್ ಫೌಂಡೇಷನ್(ಡಬ್ಲ್ಯುಸಿಎಫ್) ವತಿಯಿಂದ ನಡೆದ ಅಧ್ಯಯನ ಶಿಬಿರದಲ್ಲಿ ಯೂತ್ ಹಾಸ್ಟೆಲ್ ಗಂಗೋತ್ರಿ ಘಟಕದ 25 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎರಡು ದಿನಗಳ ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಡಬ್ಲ್ಯುಸಿಎಫ್ ಸಂಸ್ಥೆಯ ಮುಖ್ಯಸ್ಥ ಡಿ.ರಾಜಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ನಾಗೇಂದ್ರ ಪ್ರಸಾದ್ ಸೇರಿದಂತೆ ಇನ್ನಿತರರು…