ಮೈಸೂರು: ಮೈಸೂರು ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿನ ಹಂತಕ್ಕೆ ತಲುಪಿರುವುದರಿಂದ ಡಿಸೆಂಬರ್ ಮೊದಲ ವಾರದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳ ಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಹಂತೇಶಪ್ಪ ತಿಳಿಸಿದ್ದಾರೆ. ಮೈಸೂರು ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ ಅಧ್ಯಕ್ಷತೆ ಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಭತ್ತದ ಬೆಳೆ ಹಾಗೂ ಖರೀದಿ ಕೇಂದ್ರಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷ ಜಿ.ನಟರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಂತೇಶಪ್ಪ, ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…