ನದಿಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ
ಮಂಡ್ಯ

ನದಿಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ

August 15, 2018

ಮಂಡ್ಯ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣ ರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಜಲಾಶಯದಿಂದ 1,50, 000 ಲಕ್ಷ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾ ಧಿಕಾರಿ ಎನ್.ಮಂಜುಶ್ರೀ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರ ಕ್ಷತೆಗೆ ಮುಂಜಾಗ್ರತೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷ್ಣರಾಜಸಾಗರ ಜಲಾಶಯದಿಂದ ಈಗಾಗಲೇ 1.50 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗು ತ್ತಿದ್ದು, ಪ್ರವಾಹದ ಮುನ್ನೆಚ್ಚರಿಕೆಯನ್ನು ನದಿಪಾತ್ರದ ಗ್ರಾಮಗಳ ಜನರಿಗೆ ತಿಳಿಸಲು ಅಧಿಕಾರಿಗಳು ಮುಂದಾ ಗಬೇಕು. ಕಾವೇರಿ ನದಿಯ ಎರಡೂ ದಂಡೆಗಳ ಲ್ಲಿನ ಜನರು ತಮ್ಮ ಆಸ್ತಿ ಹಾಗೂ ಜಾನುವಾರು ಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಜಾಗೃತಿ ಮೂಡಿಸ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾರ್ವಜನಿಕರು ಸಹಾಯಕ್ಕಾಗಿ ಕಂಟ್ರೋಲ್ ನಂಬರ್ 08232-224888, 1077 ಹಾಗೂ 100 ಸಂಖ್ಯೆಗೆ ಕರೆ ಕೂಡ ಮಾಡಬಹುದು. ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿ ಗಳು ಸಂಬಂಧಪಟ್ಟ ಅಧಿಕಾರಿಗಳ ಶೀಘ್ರ ಸಭೆ ನಡೆಸಿ, ತುರ್ತು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳ ಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡಬಾರದು. ಪ್ರವಾಹ ಸಾಧ್ಯತೆ ಕಂಡು ಬಂದಲ್ಲಿ ಅಂತಹ ಪ್ರದೇಶದ ಜನರನ್ನು ಹತ್ತಿರದ ಶಾಲೆ ಅಥವಾ ಅಂಗನವಾಡಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಶ್ರೀರಂಗಟಪಟ್ಟಣ ಹಾಗೂ ಪಾಂಡವಪುರ ತಾಲೂಕಿನ ಗ್ರಾಮಗಳ ಜಮೀನಿಗೆ ನೀರು ಬರು ವುದರಂದ ಅಲ್ಲಿನ ಗ್ರಾಮಗಳ ಜನರು ಹೊರ ಹರಿವು ಜಾಸ್ತಿಯಿರುವುದರಿಂದ ತಮ್ಮ ಜಾನುವಾರು ಗಳನ್ನು ಮೇಯಿಸುವುದು ಹಾಗೂ ಕೃಷಿ ಚಟು ವಟಿಕೆಗಳನ್ನು ಮಾಡುವುದನ್ನು ನಿಲ್ಲಿಸಬೇಕು. ಅಲ್ಲದೇ ಈಜುವುದು, ಬಟ್ಟೆ ಒಗೆಯುವುದು ಹಾಗೂ ಬೋಟಿಂಗ್‍ಗೆ ಹೋಗುವುದನ್ನು ನಿರ್ಬಂ ಧಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಕಾವೇರಿ ನೀರಾವರಿ ನಿಗಮ ಅಧೀಕ್ಷಕ ಇಂಜಿನಿಯರ್ ಅಮರನಾಥ್, ಕಾರ್ಯಪಾಲಕ ಇಂಜಿನಿಯರ್ ಬಸವರಾಜೇಗೌಡ, ಎಸಿ ರಾಜೇಶ್, ಶೈಲಜ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Translate »