ಮಳೆ ಹಾನಿಗೆ ತ್ವರಿತವಾಗಿ ಕ್ರಮವಹಿಸಿ
ಮಂಡ್ಯ

ಮಳೆ ಹಾನಿಗೆ ತ್ವರಿತವಾಗಿ ಕ್ರಮವಹಿಸಿ

June 4, 2018

ಮಂಡ್ಯ: ಮಳೆ ಹಾನಿ ಪರಿ ಹಾರಕ್ಕೆ ಅಗತ್ಯ ವಾದ ಹಣವನ್ನು ಈಗಾಗಲೇ ನೀಡಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮಳೆಯಿಂದ ನಷ್ಟಕೊಳ ಗಾದವರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಮುಂದಾಗಬೇಕೆಂದು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.

ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆಯಿಂದಾಗುವ ಹಾನಿಯ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ಮಳೆಯಿಂದ ಭಾರೀ ನಷ್ಟ ವಾಗಿದೆ. ಅತಿವೃಷ್ಠಿ ಸಮಯದಲ್ಲಿ ಅಧಿಕಾರಿಗಳು ಬಹಳ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಸಂತ್ರಸ್ತ ಪೀಡಿತರಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ಅಧಿಕಾರಿಗಳು ದಿನದ 24 ಗಂಟೆಯೂ ಕಟ್ಟೆಚ್ಚರ ವಹಿಸಬೇಕು ಎಂದರು. ಮಳೆ ಬರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಡಿಲು-ಮಿಂಚಿನ ಬಗ್ಗೆ ಮಾಹಿತಿ ನೀಡಬೇಕು. ಪ್ರವಾಹ ವಿಕೋಪಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಕಂದಾಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಕಳೆದ ವರ್ಷ ಯಾವ ಯಾವ ಕಡೆ ಮಳೆಯಿಂದ ಹೆಚ್ಚು ಅನಾಹುತಗಳಾಗಿವೆ ಅಲ್ಲಿ ಹೆಚ್ಚು ಅಗತ್ಯ ಕ್ರಮ ವಹಿಸಬೇಕು. ಒಣಗಿ ಹೋಗಿದ್ದ, ಮುರಿದು ಬೀಳುವ ಹಂತದಲ್ಲಿರುವ ಮರಗಳನ್ನು ಹಾಗೂ ಕೊಂಬೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದಲ್ಲಿ ತೆರವು ಗೊಳಿಸಬೇಕು ಎಂದು ತಿಳಿಸಿದರು.

ಪ್ರವಾಹ ಸಂದರ್ಭ ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ, ರಕ್ಷಣಾ ಕಾರ್ಯ ಗಳನ್ನು ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕು. ನೈಸರ್ಗಿಕ ವಿಪತ್ತಿನ ಪರಿಸ್ಥಿತಿ ಎದುರಿಸಲು ರಕ್ಷಣಾ ತಂಡಗಳು ಮುಂಜಾಗ್ರತಾ ಕ್ರಮವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ದಿನದ 24 ಗಂಟೆಗಳು ಕಾರ್ಯ ನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆದು ಅಧಿಕಾರಿ ಗಳು ಹಾಗೂ ಸಿಬ್ಬಂದಿಗಳನ್ನು ನೇಮಿಸಬೇಕು ಎಂದರು. ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಮಾತ ನಾಡಿ, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದವರಿಗೆ ಪರಿಹಾರ ನೀಡಲು 4.14 ಕೋಟಿ ರೂ. ಮೀಸಲಿದೆ. 2018 ಮಾರ್ಚ್‍ನಿಂದ ಇಲ್ಲಿವರೆಗೆ ಮಳೆಯಿಂದ 6 ಜನ ಮೃತಪಟ್ಟಿದ್ದು, 12 ಕುರಿ ಹಾಗೂ ಹಸು ಸಾವನ್ನಪ್ಪಿದೆ. 403 ಮನೆಗಳು ಹಾನಿಗೊಳ ಗಾಗಿದ್ದು, ಬಹಳಷ್ಟು ಜನರಿಗೆ ಪರಿಹಾರ ನೀಡಲಾಗಿದೆ. 103 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 17 ಲಕ್ಷ ರೂ. ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಎಡಿಸಿ ಬಿ.ಪಿ.ವಿಜಯ್, ಜಿಪಂ ಉಪ ಕಾರ್ಯದರ್ಶಿ ಕೃಷ್ಣರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಾ ಸುಲೋಚನಾ, ಎಸಿ ಚಿದಾನಂದ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಜು ಇದ್ದರು.

Translate »