ಹಾಸನ: ಜಿಲ್ಲೆಯಲ್ಲಿ ಶಾಲೆ ಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ತರಗತಿಗಳಿಗೆ ಕರೆತರಲು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ವೈಶಾಲಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಂದು 2018-19ನೇ ಸಾಲಿನಲ್ಲಿ ನಾಳೆ ಯಿಂದ ಹೊರಗುಳಿದ ಮಕ್ಕಳನ್ನು ಗುರುತಿ ಸಲು ವಿಸ್ತøತವಾದ ಮತ್ತು ಪರಿಣಾಮ ಕಾರಿ ಸಮೀಕ್ಷೆ ನಡೆಸುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೂ ಕಡ್ಡಾಯ ಶಿಕ್ಷಣದ ಹಕ್ಕು ಇದ್ದು ಯಾರೂ ಅದರಿಂದ ವಂಚಿತರಾ ಗದಂತೆ ಮುಂಜಾಗ್ರತೆ ವಹಿಸಿ ಎಂದರು.
ಶಿಕ್ಷಣ ಇಲಾಖೆಯಲ್ಲಿ ಈಗಾಗಲೇ ಮಕ್ಕಳ ಪತ್ತೆ ವ್ಯವಸ್ಥೆ ಜಾರಿಯಲ್ಲಿದೆ. ಬೇರೆ ಜಿಲ್ಲೆಗಳ ಅಧಿಕಾರಿಗಳನ್ನು ಸಂಪರ್ಕದಲ್ಲಿರಿಸಿಕೊಂಡು ಶಾಲೆ ಬಿಟ್ಟು ದುಡಿಮೆಯಲ್ಲಿ ತೊಡಗಿರುವ ಬಗ್ಗೆ ಪರಿಶೀಲನೆ ನಡೆಸಿ ಮಕ್ಕಳ ಹಕ್ಕು ರಕ್ಷಣೆ ಮಾಡಿ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಮಾತ ನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಣ ಇಲಾಖೆ ಜೊತೆಗೆ ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ಕೈಜೋಡಿಸಬೇಕು ಎಂದರು.
ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಪಂಚಾಯಿತಿ ಸದಸ್ಯರು, ಎಸ್. ಡಿ.ಎಂ.ಸಿ. ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಎನ್.ಎಸ್. ಎಸ್. ಸ್ವಯಂ ಸೇವಕರ ಸಹಾಯದಿಂದ ತಂಡ ರಚಿಸಿ ಮಕ್ಕಳ ಗ್ರಾಮ ಸಭೆ ನಡೆಸಿ ಶಾಲೆ ಬಿಟ್ಟ ಮಕ್ಕಳ ವಿವರ ಹಾಲಿ ವಾಸದ ಬಗ್ಗೆ ಮಾಹಿತಿ ಪಡೆದು ಶಾಲೆಗೆ ಮರು ಸೇರ್ಪಡೆಗೆ ಕ್ರಮ ವಹಿಸಿ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈವರೆಗೆ 789 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಅದ ರಲ್ಲಿ ಆಲೂರು ತಾಲೂಕಿನಲ್ಲಿ 14, ಅರಕಲ ಗೂಡು 44, ಅರಸೀಕೆರೆ 161, ಬೇಲೂರು 67, ಚನ್ನರಾಯಪಟ್ಟಣ 175, ಹಾಸನ 169, ಹೊಳೆನರಸೀಪುರ 59 ಮತ್ತು ಸಕಲೇಶಪುರ ತಾಲೂಕಿನಲ್ಲಿ 100 ಮಕ್ಕಳು ಶಾಲೆ ಬಿಟ್ಟಿದ್ದಾರೆ ಎಂದು ಹೇಳಿದರು.
ವಿವಿಧ ಇಲಾಖೆಗಳೊಂದಿಗೆ ಸಮ ನ್ವಯ ಸಾಧಿಸಿ ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದರು. ಕಾರ್ಮಿಕ ಅಧಿಕಾರಿ ರಮೇಶ್ ಅವರು ಇಲಾಖೆ ವತಿಯಿಂದ ಬಾಲಕಾರ್ಮಿಕರ ಪತ್ತೆಗೆ ನಡೆಸುತ್ತಿರುವ ಕ್ರಮಗಳ ಬಗ್ಗೆ ವಿವರಿಸಿ ದರು. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.