ಬೆಂಗಳೂರು, ಫೆ.೧೧-ಸೋಮವಾರದಿಂದ ರಾಜ್ಯದಲ್ಲಿ ಪ್ರೌಢಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆ ಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಹಲವಾರು ನಿರ್ದೇ ಶನಗಳನ್ನು ನೀಡಿದ್ದಾರೆ. ಯಾವುದೇ ಒತ್ತಡಕ್ಕೆ ಮಣ ಯದೆ ಸಣ್ಣಪುಟ್ಟ ಘಟನೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣ ಸಿ ಕ್ರಮ ಕೈಗೊಳ್ಳಬೇಕು. ಸೂಕ್ಷö್ಮ ಜಿಲ್ಲೆಗಳಲ್ಲಿ ಎಸ್ಪಿ ಮತ್ತು ಡಿಸಿಗಳು ಪ್ರಮುಖ ಶಾಲೆಗಳಿಗೆ ಭೇಟಿ ನೀಡಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊAದಿಗೆ ಜಿಲ್ಲಾಧಿಕಾರಿ ಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಡಿಡಿಪಿಐ ಗಳು ನಿರಂತರ ಸಂಪರ್ಕ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಯಿತು. ಸಮಾಜಘಾತುಕ ಶಕ್ತಿಗಳನ್ನು ಗುರು ತಿಸಿ ಅವರ ಮೇಲೆ ನಿಗಾ ವಹಿಸಬೇಕು.
ಮೇಲಿನಿಂದ ಯಾವುದೇ ಆದೇಶಕ್ಕೆ ಕಾಯದೆ ಸಂದರ್ಭಕ್ಕೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಾಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಬೇಕು. ಜಿಲ್ಲೆಯ ಹಿರಿಯರು, ಪ್ರಮುಖರು ಹಾಗೂ ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ನಿರಂತರ ಸಂಪರ್ಕ ಹೊಂದಿರಬೇಕು. ಶಾಂತಿ ಸಭೆಯನ್ನು ನಡೆಸಿ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳು ಹೊರಗಿನವರ ಪ್ರಚೋದನೆಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಸಂಘ-ಸAಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಅವರನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಂಶುಪಾಲರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತರಬೇಕು. ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಧಾರ್ಮಿಕ ಮುಖಂಡರುಗಳನ್ನು ಹಿರಿಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸುವ ಮೂಲಕ ತಪ್ಪು ಮಾಹಿತಿ ಹರಡದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಸಭೆಯ ನಂತರ ಸುದ್ದಿಗಾರರಿಗೆ ವಿವರ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಕಳೆದ ಎರಡು ವರ್ಷದಲ್ಲಿ ಕೋವಿಡ್‌ನಿಂದ ವಿದ್ಯಾರ್ಥಿಗಳ ಭವಿಷ್ಯ ಅಯೋಮಯವಾಗಿದೆ. ವಿದ್ಯಾರ್ಥಿಗಳು ಶೈಕ್ಷಣ ಕವಾಗಿ ಹಿಂದುಳಿದಿದ್ದಾರೆ. ಪಾಠಗಳು ನಡೆಯಬೇಕು. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭವವಸೆ ತುಂಬಬೇಕಾಗಿದೆ. ಸೋಮವಾರ ಪರಿಸ್ಥಿತಿ ಅವಲೋಕಿಸಿ ಕಾಲೇಜು ಆರಂಭದ ಬಗ್ಗೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಡಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣನ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.