ಜನರ ಆರ್ಥಿಕತೆಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ
News

ಜನರ ಆರ್ಥಿಕತೆಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ

December 27, 2022

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್‍ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಸಚಿವಸಂಪುಟ ದಲ್ಲಿ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್‍ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸು ವುದು, ಮಾಸ್ಕ್‍ಗಳಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್‍ಧಾರಣೆ ಕಡ್ಡಾಯಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಹಂತಹಂತವಾಗಿ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು. ಪ್ರತಿ ಬಾರಿಯಂತೆ ಈ ವರ್ಷವೂ ನಿಯಮ ಗಳಿದ್ದು, ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೇರಿಸಲಾಗುವುದು. ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜಾರಿ ಮಾಡಲಾಗುವುದು ಎಂದರು. ಬೆಳಗಾವಿಯಲ್ಲಿನ ಅಧಿವೇಶನ ಫಲಪ್ರದ ಹಾಗೂ ಅರ್ಥಪೂರ್ಣವಾಗಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು. ವಿರೋಧಪಕ್ಷಗಳು ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಿವೆ. ಯಾವ ವಿಚಾರವೇ ಆಗಲಿ ಚರ್ಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.

Translate »