ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ
ಹಾಸನ

ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ

April 5, 2020

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಸೂಚನೆ
ಹಾಸನ,ಏ.4-ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಿ ಹಾಗೂ ಸಾರ್ವಜನಿಕರ ಅನಗತ್ಯ ಓಡಾಟ ತಪ್ಪಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಮೈಸೂರು ಮಿನರಲ್ಸ್ ವ್ಯವಸ್ಥಾಪಕ ನಿರ್ದೇಶಕ ನವೀನ್‍ರಾಜ್ ಸಿಂಗ್ ಸೂಚಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಿದ ಅವರು, ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಸೋಂಕು ತಪಾಸಣೆ ಹಾಗೂ ಚಿಕಿತ್ಸೆಗೆ ಸುಸಜ್ಜಿತಗೊಳಿಸಲು ನಿರ್ದೇಶನ ನೀಡಿದರು.

ಹಾಸನ ವೈದ್ಯಕೀಯ ಕಾಲೇಜು ಮುಖ್ಯಸ್ಥ ಡಾ.ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮುರ್ತಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸತೀಶ್ ಅವರಿಂದ ಜಿಲ್ಲೆಯಲ್ಲಿನ ಕೋವಿಡ್ ನಿಯಂತ್ರಣ, ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 400 ಹಾಸಿಗೆಗಳು ಸಿದ್ಧದ್ದು, 18 ವೆಂಟಿಲೇಟರ್‍ಗಳು ಮಾತ್ರ ಇವೆ. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞರ ಕೊರತೆ ಹಿನೆÀ್ನಲೆಯಲ್ಲಿ ಸೋಂಕಿತರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ. ತುರ್ತು ಸಂದರ್ಭ ಎದುರಾದಲ್ಲಿ ಮಾತ್ರ ತಾಲೂಕು ಆಸ್ಪತ್ರೆಗಳಲ್ಲಿನ ವೆಂಟಿಲೇಟರ್‍ಗಳನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲೆಗೆ ಅಗತ್ಯ ಪ್ರಮಾಣದ ಪಿ.ಪಿ.ಕಿಟ್ ಹಾಗೂ ಮಾಸ್ಕ್‍ಗಳನ್ನು ಒದಗಿಸಲು ಸರ್ಕಾರದ ಹಂತದಲ್ಲಿ ಚರ್ಚಿಸಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕಠಿಣ ಕ್ರಮಕೈಗೊಳ್ಳಬೇಕು. ಹೊರ ದೇಶ ಹಾಗೂ ದೆಹಲಿ ಸೇರಿದಂತೆ ಹೊರ ರಾಜ್ಯಗಳಿಂದ ಬಂದಿರುವವರನ್ನು ತಪಾಸಣೆಗೆ ಒಳಪಡಿಸಿ. ಹೋಂ ಕ್ವಾರಂಟೈನ್‍ನಲ್ಲಿ ಇರುವವರ ಬಗ್ಗೆ ನಿಗಾ ವಹಿಸಿ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಜಿಲ್ಲೆಯಲ್ಲಿ ಲಾಕ್‍ಡೌನ್ ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಸಿಇಓ ಬಿ.ಎ.ಪರಮೇಶ್, ಎಡಿಸಿ ಕವಿತಾ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ.ನವೀನ್ ಭಟ್ ಅಗತ್ಯ ಮಾಹಿತಿ ನೀಡಿದರು. ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »