ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳು-ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿ
ಕೊಡಗು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳು-ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸಿ

July 14, 2021

ಚಾಮರಾಜನಗರ, ಜು.13- ಎಸ್‍ಎಸ್ ಎಲ್‍ಸಿ ಪರೀಕ್ಷೆಯನ್ನು ಶಿಕ್ಷಕರು ಹಗುರ ವಾಗಿ ಪರಿಗಣಿಸದೇ ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ಜೊತೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸಲಹೆ ನೀಡಿದರು.
ಜುಲೈ 19 ಹಾಗೂ 22ರಂದು ನಡೆಯಲಿ ರುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಿದ್ಧತೆ ಸಂಬಂಧ ನಗರದ ಜಿಪಂ ಸಭಾಂಗಣ ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಹು ಆಯ್ಕೆ ಮಾದರಿ ಉತ್ತರದ ಪ್ರಶ್ನೆಗಳನ್ನು ಒಳಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲ ಆತಂಕಕ್ಕೆ ಅವಕಾಶವಾಗದ ಹಾಗೇ ಯಶಸ್ವಿ ಯಾಗಿ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿ ಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕಿದೆ ಎಂದರು.

ಪರೀಕ್ಷಾ ಕೇಂದ್ರ ಕಟ್ಟಡದ ಪ್ರತೀ ಕೊಠಡಿ ಯನ್ನೂ ಪರೀಕ್ಷೆ ಮುನ್ನಾ ಹಾಗೂ ನಂತರ ಸ್ಯಾನಿಟೈಜ್ ಮಾಡಬೇಕು. ಕುಡಿಯುವ ನೀರು, ಶೌಚಾಲಯದಂತಹ ಮೂಲ ಸೌಲಭ್ಯಗಳು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಥರ್ಮಲ್ ಸ್ಕ್ಯಾನರ್ ಇತರೆ ಅವಶ್ಯ ಸಾಧನ ಗಳೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಿಸಬೇಕು. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತೀ ತಾಲೂಕಿಗೂ ತುರ್ತು ಚಿಕಿತ್ಸಾ ವಾಹನ ನಿಯೋಜಿಸಿರಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಲಸಿಕೆ ಪಡೆದಿರಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಅಗತ್ಯಕ್ಕೆ ಅನುಗುಣವಾಗಿ ನಿಗದಿತ ಸಮಯಕ್ಕೆ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕಾರ್ಯವನ್ನು ಅತ್ಯಂತ ಪಾರದರ್ಶಕ ವಾಗಿ ನಿರ್ವಹಿಸಬೇಕು. ಅಕ್ರಮಕ್ಕೆ ಅವಕಾಶವಾಗಬಾರದು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಟಿ.ಎಸ್.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಂ.ಸಿ.ರವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಮಲ್ಲಿ ಕಾರ್ಜುನ್ ಇತರರು ಸಭೆಯಲ್ಲಿದ್ದರು.

Translate »