ಪ್ರತಿಭೆ ಯಾರ ಮನೆ ಸ್ವತ್ತೂ ಅಲ್ಲ: ಸೋಮಣ್ಣ
ಮೈಸೂರು

ಪ್ರತಿಭೆ ಯಾರ ಮನೆ ಸ್ವತ್ತೂ ಅಲ್ಲ: ಸೋಮಣ್ಣ

October 6, 2021

ಮೈಸೂರು, ಅ.5(ಆರ್‍ಕೆಬಿ)- ಮೈಸೂರಿನ ಶ್ರೀ ಹೊಸಮಠ ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನೇಹ ಸಿಂಚನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಸತಿ ಸಚಿವ ವಿ.ಸೋಮಣ್ಣ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಮೂವರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.

ಕಾಲೇಜಿನ ನಟರಾಜ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರಾದ ರಕ್ಷಿತಾ, ಚಂದನಾ, ರಂಜಿತಾ ಅವರನ್ನು ಗೌರವಿಸಿದ ಸಚಿವರು, ಪ್ರತಿಭೆ ಯಾರ ಮನೆಯ ಸ್ವತ್ತೂ ಅಲ್ಲ. ಪ್ರತಿಭಾ ಪುರಸ್ಕಾರಕ್ಕಾಗಿ ದತ್ತಿ ಸ್ಥಾಪನೆ ಮಾಡಿದರೆ ಅದಕ್ಕೆ ತಾವು ಒಂದು ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಟರಾಜ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೇಯರ್ ಸುನಂದಾ ಪಾಲನೇತ್ರ, ನಗರಪಾಲಿಕೆ ಸದಸ್ಯ ಬಿ.ವಿ.ಮಂಜು ನಾಥ್, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಶಾರದಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿ.ಡಿ.ಸುನೀತಾ ರಾಣಿ ಇನ್ನಿತರರು ಇದ್ದರು.

Translate »