ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಚರ್ಚೆ: ಸಚಿವ ಎನ್.ಮಹೇಶ್
ಹಾಸನ

ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಬಗ್ಗೆ ಚರ್ಚೆ: ಸಚಿವ ಎನ್.ಮಹೇಶ್

July 26, 2018

ಹಾಸನ: ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿರುವಂತೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವವರಿಗೆ ವಿಸ್ತರಿಸುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು ವರದಿಯನ್ನು ಕೇಳಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಶಾಲಾ ಕಾಲೇಜು ಮಕ್ಕಳಿಗೆ ಉಚಿತವಾಗಿ ಬಸ್‍ಪಾಸ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವ ಕುರಿತು ಮುಖ್ಯಮಂತ್ರಿಗಳು ವರದಿ ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಬಗ್ಗೆ ಯಾವುದೇ ಗೊಂದಲವಿಲ್ಲ. ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಲಿದೆ ಎಂದ ಸಚಿವರು, ರಾಜ್ಯದ ಯಾವ ಮಗುವೂ ಕೂಡ ಶಾಲೆಯಿಂದ ಹೊರಗುಳಿಯಬಾರದು ಎಂಬುದು ತಮ್ಮ ಉದ್ದೇಶವಾಗಿದೆ. ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿ ಸಲು ಓಪನ್ ಬುಕ್ ಪರೀಕ್ಷೆ ಜಾರಿಗೆ ತರುವ ಚಿಂತನೆ ಇದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗು ವುದು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ವಿದ್ಯಾಭ್ಯಾಸ ನೀಡುವ ಕುರಿತು ಪಠ್ಯಕ್ರಮಗಳಲ್ಲಿ ಬದಲಾವಣೆ ತರುವ ಅಗತ್ಯವಿದೆ ಎಂದರು.

ನಂತರದಲ್ಲಿ ನಗರದ ಚನ್ನಪಟ್ಟಣ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು, ಪ್ರತಿ ತರಗತಿಗೂ ತೆರಳಿ ಸ್ವತಃ ಶಾಲಾ ಮಕ್ಕಳು ಕೂರುವ ಜಾಗದಲ್ಲಿ ಕುಳಿತು ಮಕ್ಕಳ ಗಮನ ಸೆಳೆದರು. ಪ್ರಶ್ನೆಗಳನ್ನು ಕೇಳಿ ಮಕ್ಕಳಿಂ ದಲೇ ಉತ್ತರ ಪಡೆದರು. ಸಮರ್ಪಕವಾಗಿ ಉತ್ತರಿಸುವ ಮೂಲಕ ವಿದ್ಯಾರ್ಥಿಗಳು ಬೇಷ್ ಎನಿಸಿಕೊಂಡರು. ಜೊತೆಗೆ ಮಕ್ಕಳ ಬರವಣಿಗೆ ಶೈಲಿಗಳನ್ನು ಕೂಡ ವೀಕ್ಷಿಸಿ, ಕೆಲ ಸಲಹೆ ನೀಡಿದರು. ಅಲ್ಲದೆ ಈ ವೇಳೆ ಕೆಲವೊಂದು ನ್ಯೂನ್ಯತೆಯನ್ನು ಸರಿಪಡಿಸಿಕೊಳ್ಳಲು ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು. ಶಾಲೆಯಲ್ಲಿ ಗೋಡೆ ಶಿಥಿಲಗೊಂಡಿರುವ ಬಗ್ಗೆ ಅಸಮಾ ಧಾನ ವ್ಯಕ್ತಪಡಿಸಿದರಲ್ಲದೆ, ದುರಸ್ತಿ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಶಿಫಾರಸ್ಸು ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಶಾಲಾ ಸಿಬ್ಬಂದಿ ಹಾಜರಿದ್ದರು.

Translate »