ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿಗೆ ತಮಿಳ್ನಾಡು ಸಿಎಂ ಸ್ಟಾಲಿನ್ ಮನವಿ
News

ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿಗೆ ತಮಿಳ್ನಾಡು ಸಿಎಂ ಸ್ಟಾಲಿನ್ ಮನವಿ

June 18, 2021

ನವದೆಹಲಿ: ಕರ್ನಾಟಕ ಮತ್ತು ತಮಿಳು ನಾಡಿನ ನದಿ ನೀರು ಹಂಚಿಕೆಗೆ ಸಂಬಂ ಧಿಸಿದಂತೆ ಸದಾ ವಿವಾದ ಸೃಷ್ಟಿಸುವ ತಮಿಳುನಾಡು ಹಳೆಯ ಚಾಳಿಯನ್ನು ಮತ್ತೆ ಮುಂದುವರೆಸಿದೆ. ಗುರು ವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದ ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕರ್ನಾಟಕ ಸರ್ಕಾರ ಆರಂಭಿ ಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ದ್ದಾರೆ. ಇನ್ನೊಂದೆಡೆ ಕರ್ನಾಟಕ ಸರ್ಕಾರ ವಿರೋಧಿಸುತ್ತಿರುವ ನೀರಾವರಿ ಯೋಜನೆಗಳನ್ನು ಆರಂಭಿಸಲು ಅನುಮತಿ ಕೇಳಿದ್ದಾರೆ.

ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಎಂ.ಕೆ.ಸ್ಟಾಲಿನ್, ಮೊದಲು ಪ್ರಸ್ತಾಪಿಸಿರುವುದು ಕರ್ನಾಟಕ
ಆರಂಭಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ಬಗ್ಗೆ. ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಈಗಾಗಲೇ ಸುಪ್ರೀಂಕೋರ್ಟಿನಲ್ಲೂ ದೂರು ದಾಖ ಲಿಸಿದೆ. ಸುಪ್ರೀಂಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ ಕರ್ನಾಟಕ ಯೋಜನೆ ಜಾರಿಗೆ ಇರುವ ಇತರೆ ಅಡೆ ತಡೆಗಳನ್ನು ನಿಯಂತ್ರಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೆರವು ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಎರಡೂ ರಾಜ್ಯಗಳ ನಡುವೆ ನದಿ ನೀರು ಹಂಚಿಕೆಯ ನಿರ್ವಹಣೆ ಮಾಡುತ್ತಿದೆ. ಇದಲ್ಲದೆ ಕಾವೇರಿ ಮೇಲುಸ್ತುವಾರಿ ಸಮಿತಿ ಕೂಡ ಇದ್ದು ಅದು ಪ್ರತಿ ತಿಂಗಳು ಮಳೆ ಮತ್ತು ನೀರಿನ ಒಳ ಹಾಗೂ ಹೊರ ಹರಿವಿನ ಬಗ್ಗೆ ಎರಡೂ ರಾಜ್ಯಗಳ ನಡುವೆ ಪ್ರತಿ ತಿಂಗಳು ಸಭೆ ನಡೆಸುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಕಾವೇರಿ ನೀರು ಸಮರ್ಪಕ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸ್ಟಾಲಿನ್ ಆಗ್ರಹಿಸಿದ್ದಾರೆ.

Translate »