ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್‍ಗೆ ಆಗ್ರಹಿಸಿ ಶಿಕ್ಷಣ ಸಚಿವರಿಗೆ ಮನವಿ
ಮೈಸೂರು

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್‍ಗೆ ಆಗ್ರಹಿಸಿ ಶಿಕ್ಷಣ ಸಚಿವರಿಗೆ ಮನವಿ

September 6, 2020

ಬೆಂಗಳೂರು, ಸೆ.5(ಕೆಎಂಶಿ)- ಅನುದಾನ ರಹಿತ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್ ಬಿಡು ಗಡೆ ಮಾಡುವಂತೆ ಆಗ್ರಹಿಸಿ ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ವತಿಯಿಂದ ಸಾಂಕೇತಿಕ ಧರಣಿ ನಡೆಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ನಗರದ ಸಚಿವರ ನಿವಾಸದ ಎದುರು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂನ ಅಧ್ಯಕ್ಷ ಎ.ಪಿ.ರಂಗನಾಥ್, ಕಾರ್ಯಾಧ್ಯಕ್ಷ ಮುಕುಂದರಾಜ್, ಕಾರ್ಯದರ್ಶಿ ಸೂಡಿ ಸುರೇಶ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ಈ ವೇಳೆ ಮಾತನಾಡಿದ ರಂಗನಾಥ್ ಅವರು, ಕೋವಿಡ್-19ರ ಸಾಂಕ್ರಾಮಿಕ ರೋಗ ಹರಡಿರುವ ಪರಿಸ್ಥಿತಿಯಲ್ಲಿ ಸುಮಾರು 6 ತಿಂಗಳಿನಿಂದ ಶಾಲಾ ಕಾಲೇಜುಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದ್ದು, ಅನುದಾನ ರಹಿತ ಶಾಲಾಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರು ವೇತನವಿಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವೇತನವನ್ನೇ ನಂಬಿ ಜೀವನ ನಡೆಸುತ್ತಿದ್ದ ಸುಮಾರು 4.50 ಲಕ್ಷ ಅನು ದಾನ ರಹಿತ ಶಾಲಾ ಶಿಕ್ಷಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷ ಪ್ಯಾಕೇಜ್, ಆರೋಗ್ಯ ವಿಮಾ, ಸೇವಾ ಭದ್ರತೆ ನೀಡು ವಂತೆ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ ಸವಲತ್ತು ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಧರಣಿ ನಡೆಸಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಮತ್ತು ಅತಿಥಿ ಉಪನ್ಯಾಸಕ ರಿಗೆ ಈ ಸವಲತ್ತು ನೀಡುವಂತೆ ಶಿಕ್ಷಣ ಸಚಿವರನ್ನು ಒತ್ತಾಯಿಸಿ ಮನವಿ ಸಲ್ಲಿಸ ಲಾಯಿತು. ನಮ್ಮ ಮನವಿಗೆ ಸಕಾರಾತ್ಮಕ ವಾಗಿ ಸಚಿವರು ಸ್ಪಂದಿಸಿದ್ದಾರೆ ಎಂದರು.

Translate »