ಮೈಸೂರು: ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಸಮರ್ಥವಾಗಿ ಬಳಸಿಕೊಂಡು ದೇಶದ ಪುನರ್ ನಿರ್ಮಾಣ ಮಾಡುವ ಹೊಣೆ ಶಿಕ್ಷಕರದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ನರಹರಿ ಇಂದಿಲ್ಲಿ ಅಭಿಪ್ರಾಯ ಪಟ್ಟರು.
ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಭಾರತ ವನ್ನು ಪುನರ್ ನಿರ್ಮಾಣ ಮಾಡುವ ಕೆಲಸ ಶಿಕ್ಷಕರ ಮೇಲಿದ್ದು, ನಾವೆಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿದರೆ ದೇಶ ಕಟ್ಟುವ ಕೆಲಸ ಸುಲಲಿತವಾಗುತ್ತದೆ ಎಂದರು.
ಇದೇ ವೇಳೆ ಮುಕ್ತ ವಿವಿಯ ಬೋಧÀಕ ವೃಂದದಿಂದ ಕುಲಪತಿ ಪ್ರೊ.ಡಿ. ಶಿವಲಿಂಗಯ್ಯ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಮುಕ್ತ ವಿವಿಗೆ ಯುಜಿಸಿಯಿಂದ ಮಾನ್ಯತೆ ದೊರಕಿ ಸುವ ಮೂಲಕ ನಮಗೂ ಸಮಾಜದಲ್ಲಿ ಮಾನ್ಯತೆ ದೊರಕುವಂತೆ ಮಾಡಿದ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಮುಕ್ತ ವಿವಿ ಅಧ್ಯಾಪಕರು ಹಾಗೂ ಸಿಬ್ಬಂದಿಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಆರ್ಟ್ ಆಫ್ ಲಿವಿಂಗ್‍ನ ರವಿಶಂಕರ್ ಗುರೂಜಿ ಅವರ `ಮೌನದ ಮಾರ್ದನಿ’ ಪುಸ್ತಕವನ್ನು ನೆನಪಿನ ಕಾಣಿಕೆಯಾಗಿ ವಿತರಿಸಿದರು. ಕುಲಸಚಿವ (ಆಡಳಿತ) ಡಾ.ಎ.ಖಾದರ್ ಪಾಷಾ, ಕುಲಸಚಿವ (ಪರೀಕ್ಷಾಂಗ) ಡಾ.ಎ.ರಂಗಸ್ವಾಮಿ ಇನ್ನಿತರರು ಇದ್ದರು.