ಬೆಡ್ ಬುಕ್ಕಿಂಗ್ ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ
ಮೈಸೂರು

ಬೆಡ್ ಬುಕ್ಕಿಂಗ್ ಮಾಫಿಯಾ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

May 5, 2021

ಬೆಂಗಳೂರು, ಮೇ 4- ಕೊರೊನಾ ಕಾಲದಲ್ಲೂ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡು ತ್ತಿದ್ದ ಮಾಫಿಯಾ ವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗ ಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ಯನ್ನು ಉದ್ದೇಶಿಸಿ ಮಾತ ನಾಡಿರುವ ಸಂಸದ ತೇಜಸ್ವಿ ಸೂರ್ಯ, ಅಕ್ರಮವಾಗಿ ಬಿಬಿಎಂಪಿ ಬೆಡ್‍ಗಳು ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿ ಸಿದ್ದಾರೆ. ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈವರೆಗೂ ಪ್ರಭಾವಿಗಳಿಂದ 4,065 ಬೆಡ್‍ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್‍ಸೈಟ್ ಗಳಲ್ಲಿ ಬೆಡ್‍ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿ ಲ್ಲದೇ ಇರುವ ಮನೆಯಲ್ಲಿಯೇ ಐಸೊ ಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ. “ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂ ಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗ ಳೂರು ದಕ್ಷಿಣ ಸಂಸದರ ಕಚೇರಿ ಬಿಬಿ ಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿ ಗಳ ಅವ್ಯವಹಾರವನ್ನು ಬಯಲಿಗೆಳೆದಿ ದ್ದಾರೆ. ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತ ರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂದಿದೆ.

ಕೃತಕ ಅಭಾವ ಸೃಷ್ಟಿಸುತ್ತಿರುವುದು ಹೇಗೆ?: “ಕೋವಿಡ್-19ನ ಯಾವುದೇ ಗುಣ ಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿ ರುವ ಸಿಬ್ಬಂದಿ, ಬೆಡ್ ನೋಂದಣಿಗೊಳಿಸಿ, ಕೆಲವೇ ಕ್ಷಣಗಳ ನಂತರ ಅದೇ ಬೆಡ್‍ನ್ನು ಹಣಕ್ಕೆ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿ ಗೊಳಿಸುತ್ತಾರೆ. ನಿಜವಾಗಿಯೂ ಅವಶ್ಯಕತೆ ಇರುವ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಬೆಡ್ ಸಲುವಾಗಿ ಅಲೆದಾಡುತ್ತಿದ್ದರೆ, ಕೆಲವೇ ಕೆಲವರು ಅಕ್ರಮವಾಗಿ ಬೆಡ್‍ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಬೆಡ್‍ಗಳ ಕೃತಕ ಅಭಾವ ಸೃಷ್ಟಿಯನ್ನು ವಿವರಿಸಿದ್ದಾರೆ.

ಎಷ್ಟೋ ಮಂದಿಗೆ ತಮ್ಮ ಹೆಸರಿನಲ್ಲಿ ಬೆಡ್ ಬುಕ್ ಆಗಿರುವುದೇ ತಿಳಿದಿಲ್ಲ ಎಂಬ ಆಘಾತಕಾರಿ ಅಂಶವನ್ನು ಸುದ್ದಿಗೋಷ್ಠಿ ಯಲ್ಲಿ ಸಂಸದರು ತೆರೆದಿಟ್ಟಿದ್ದಾರೆ. ಕೆಲವು ಬಿಬಿಎಂಪಿ ಅಧಿಕಾರಿಗಳೇ ಇದರಲ್ಲಿ ಶಾಮೀ ಲಾಗಿದ್ದಾರೆ, ಮನಸ್ಸೋ ಇಚ್ಛೆ ಬೆಡ್ ಬುಕ್ ಮಾಡುವುದಕ್ಕೆ ಅದೇನು ಬಿಬಿ ಎಂಪಿ ಅಧಿಕಾರಿಗಳ ಜಹಗೀರ? ಎಂದು ತೇಜಸ್ವಿ ಸೂರ್ಯ ಕೆಂಡಾ ಮಂಡಲ ರಾಗಿದ್ದಾರೆ. ಕೋವಿಡ್-19 ವಾರ್ ರೂಮ್‍ಗೆ ಹೋಗಿ ಸಮಸ್ಯೆಗಳಿದ್ದರೆ ಬಗೆಹರಿಸಲು ಸಹಕರಿಸಲು ಯತ್ನಿಸಿದರೂ ಜನಪ್ರತಿ ನಿಧಿಗಳಿಗೆ ವಾರ್ ರೂಮ್‍ಗಳಿಗೆ ಹೋಗಲು ಬಿಡುತ್ತಿರಲಿಲ್ಲ ಎಂದು ಶಾಸಕ ಸತೀಶ್ ರೆಡ್ಡಿ ಅವರು ಜನರನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರೂ ಸಹ ವಾರ್ ರೂಮ್ ಒಳಗೆ ಹೋಗಿ ತಪಾಸಣೆ ನಡೆಸು ವುದಕ್ಕೆ ಬಿಡದಂತಹ ವಾತಾವರಣ ಇದೆ ಎಂದು ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ. ಹಣ ನೀಡಿ ಬೆಡ್ ಪಡೆದವರು ತಮಗೆ ಯಾವುದೇ ಭಯವಿಲ್ಲದೇ ಮಾಹಿತಿ ನೀಡಬೇಕು, ಮಾಹಿತಿ ನೀಡಿದವರ ಗೌಪ್ಯತೆ ಯನ್ನು ಕಾಪಾಡಲಾಗುವುದು ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. ಸಂಜೆ 5.30ಕ್ಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಇದು ಕೇವಲ ಭ್ರಷ್ಟಾಚಾರವಲ್ಲ, ಕೊಲೆ. ಬೆಡ್ ಸಿಗದೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೇಳುತ್ತೇನೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಈ ವಿಷಯವನ್ನು ಬಿಡುವುದಿಲ್ಲ ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಭಾಗಿಯಾಗಿದ್ದರು.

Translate »