ತೆಲಂಗಾಣ ವಿಧಾನಸಭೆ ವಿಸರ್ಜನೆ
ಮೈಸೂರು

ತೆಲಂಗಾಣ ವಿಧಾನಸಭೆ ವಿಸರ್ಜನೆ

September 7, 2018

ಹೈದರಾಬಾದ್: ನಿರೀಕ್ಷೆ ಯಂತೆಯೇ ತೆಲಂ ಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಅವ ಧಿಗೂ ಮುನ್ನವೇ ವಿಧಾನಸಭೆ ಚುನಾ ವಣೆಗೆ ತೆರಳಲು ನಿರ್ಧ ರಿಸಿದ್ದು, ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ತೆಲಂ ಗಾಣ ಸಿಎಂ ಕೆ.ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬಳಿಕ ಸಿಎಂ ಕೆಸಿಆರ್ ಅವರು ರಾಜಭವನಕ್ಕೆ ತೆರಳಿ ಅಲ್ಲಿ ರಾಜ್ಯ ಪಾಲರನ್ನು ಭೇಟಿ ಮಾಡಿ ವಿಧಾನಸಭೆ ವಿಸರ್ಜಿಸುವ ಸಂಪುಟ ನಿರ್ಣಯದ ಪ್ರತಿ ಯನ್ನು ಸಲ್ಲಿಸಿದರು. ನಿರ್ಣಯವನ್ನು ರಾಜ್ಯ ಪಾಲರು ಅಂಗೀಕರಿಸಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯ ಮಂತ್ರಿಯಾಗಿ ಮುಂದುವರೆಯುವಂತೆ ಕೆಸಿಆರ್ ಅವರಿಗೆ ಸೂಚಿಸಿದ್ದಾರೆ. ಹೊಸ ದಾಗಿ ರಾಜ್ಯ ರಚನೆಯಾದ ನಂತರ 2013 ರಲ್ಲಿ ಲೋಕಸಭೆ ಜತೆಗೇ ತೆಲಂಗಾಣ ವಿಧಾನ ಸಭೆಗೂ ಚುನಾವಣೆ ನಡೆದಿತ್ತು. ತೆಲಂ ಗಾಣ ಮೊದಲ ವಿಧಾನಸಭೆಯ ಅವಧಿ 2019ರ ಏಪ್ರಿಲ್-ಮೇ ವರೆಗೆ ಇದೆಯಾ ದರೂ, ಇದೇ ನವೆಂಬರ್ ಮತ್ತು ಡಿಸೆಂಬರ್‍ನಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದರ ಜತೆಗೇ ಚುನಾವಣೆ ಎದುರಿಸಲು ಕೆಸಿಆರ್ ತೀರ್ಮಾನಿಸಿದ್ದಾರೆ. ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಎಂಬಂತೆ ಟಿಆರ್‍ಎಸ್ ಸರ್ಕಾರ ಇತ್ತೀಚೆಗಷ್ಟೇ ನೌಕರರು, ಕಾರ್ಮಿಕರು ಹಾಗೂ ರೈತರಿಗೆ ಭರ್ಜರಿ ಕೊಡುಗೆಗಳನ್ನು ಪ್ರಕಟಿಸಿತ್ತು.

ಅಭ್ಯರ್ಥಿಗಳ ಪಟ್ಟಿ ಪ್ರಕಟ: ವಿಧಾನಸಭೆ ವಿಸರ್ಜನೆ ಮಾಡಿದ ಕೆಲವೇ ಗಂಟೆಗಳಲ್ಲಿ ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‍ಎಸ್ 105 ಕ್ಷೇತ್ರಗಳ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ರಾಹುಲ್ ದೊಡ್ಡ ಬಫೂನ್: ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿರುವ ಕೆಸಿಆರ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆಯೂ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕರು ಚುನಾವಣಾ ರಂಗಕ್ಕೆ ಬಂದು ಸವಾಲು ಎದುರಿಸಲಿ, ಜನರು ಪ್ರತ್ಯುತ್ತರ ನೀಡುತ್ತಾರೆ. ರಾಹುಲ್ ಗಾಂಧಿ ಏನೆಂಬುದು ಎಲ್ಲರಿಗೂ ಗೊತ್ತು, ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್. ಆತ ಸಂಸತ್‍ನಲ್ಲಿ ಪ್ರಧಾನಿಯನ್ನು ಆಲಿಂಗನ ಮಾಡಿ, ಕಣ್ಣು ಹೊಡೆದಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಹುಲ್ ಗಾಂಧಿ ಒಂಥರಾ ನಮಗೆ ಆಸ್ತಿ ಇದ್ದಂಗೆ. ಅವರು ಇಲ್ಲಿಗೆ ಬಂದಷ್ಟೂ ನಾವು ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ ಎಂದು ಹೇಳಿದ್ದಾರೆ.

Translate »