ಕಿರುತೆರೆ ಪ್ರತಿಭೆ ಸಮನ್ವಿ ಅಪಘಾತದಲ್ಲಿ ಸಾವು
News

ಕಿರುತೆರೆ ಪ್ರತಿಭೆ ಸಮನ್ವಿ ಅಪಘಾತದಲ್ಲಿ ಸಾವು

January 14, 2022

ಬೆಂಗಳೂರು, ಜ.13-ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ `ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಆರಂಭ ಗೊಂಡಿದೆ. ಈ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು. ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿ ಮಾನಿಗಳಿಗೆ ದುಃಖ ತಂದಿದೆ.

ಖ್ಯಾತ ಹರಿಕಥೆ ದಾಸ ಗುರುರಾಜಲು ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿ ಶೋಗೆ ಬಂದಿದ್ದರು. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿ ದ್ದರು. ಈ ವೇಳೆ ಲಾರಿ ಬಂದು ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್. ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶೋಗೆ ಬರುವುದಕ್ಕೂ ಮೊದಲು ಮಾತನಾಡಿದ್ದ ಸಮನ್ವಿ, ನನಗೆ ಅಮ್ಮ ಎಂದರೆ ತುಂಬಾನೇ ಅಚ್ಚುಮೆಚ್ಚು. ನಾನು ಅವಳನ್ನು ಜಾಸ್ತಿ ಪ್ರೀತಿ ಮಾಡುತ್ತೇನೆ. ಪಾರ್ಟಿಗೆ ಹೋಗ್ತಾರೆ. ಅಪ್ಪನ ಜತೆ ಹಣ ಶೇರ್ ಮಾಡ್ತಾರೆ. ಈ ಕಾರಣಕ್ಕೆ ನನಗೆ ಅವಳು ಹೆಚ್ಚು ಇಷ್ಟ ಎಂದು ಹೇಳಿಕೊಂಡಿದ್ದಳು. ಉಜ್ವಲ ಭವಿಷ್ಯ ಕಾಣಬೇಕಿದ್ದ ಅವಳು ಈಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು ನಿಜಕ್ಕೂ ದುಃಖದ ಸಂಗತಿ.

Translate »