ದೇವಸ್ಥಾನದ ಹುಂಡಿಯ ಕಾಣಿಕೆ ಹಣ ಕಳವು
ಮೈಸೂರು

ದೇವಸ್ಥಾನದ ಹುಂಡಿಯ ಕಾಣಿಕೆ ಹಣ ಕಳವು

June 15, 2019

ಕಲ್ಯಾಣಗಿರಿ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಘಟನೆ
ಮೈಸೂರು: ದೇವಾಲಯದ ಬಾಗಿಲು ಮೀಟಿ ಹುಂಡಿಯಲ್ಲಿದ್ದ ಕಾಣಿಕೆ ಹಣವನ್ನು ದೋಚಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆ ದಿದೆ. ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಶ್ರೀ ಕಲ್ಯಾಣ ವೆಂಕಟ ರಮಣಸ್ವಾಮಿ ದೇವಾಲಯದ ಬಾಗಿಲು ಮೀಟಿ ಒಳನುಗ್ಗಿರುವ ಖದೀಮರು, ಆವ ರಣದಲ್ಲಿದ್ದ ಎರಡು ಹುಂಡಿಯನ್ನು ಒಡೆದು ಅದ ರಲ್ಲಿದ್ದ ಕಾಣಿಕೆ ಹಣವನ್ನು ದೋಚಿಕೊಂಡು ಪರಾರಿ ಯಾಗಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆ ದಿದ್ದು, ಶುಕ್ರವಾರ ಬೆಳಿಗ್ಗೆ ಅರ್ಚಕರು ದೇವಾ ಲಯಕ್ಕೆ ಹೋದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅವರು ದೇವಾಲಯದ ಟ್ರಸ್ಟ್‍ನ ಪದಾಧಿಕಾರಿಗಳಿಗೆ ವಿಷಯ ತಿಳಿಸಿ, ಬಳಿಕ ಉದಯಗಿರಿ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು, ದೇವಾಲಯದ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ ಫುಟೇಜ್ ಪರಿಶೀಲಿಸಿದ್ದು, ಖದೀಮರ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.

Translate »