ಉನ್ನತ ಮಟ್ಟದ ತನಿಖೆಗೆ ಡಿಸಿಎಂ ಆದೇಶ
ಮೈಸೂರು

ಉನ್ನತ ಮಟ್ಟದ ತನಿಖೆಗೆ ಡಿಸಿಎಂ ಆದೇಶ

December 16, 2018

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಸುಳ ವಾಡಿಯ ದೇವಸ್ಥಾನ ಪ್ರಸಾದ ದುರಂತ ನಂತರ ಸೂಕ್ತ ಕ್ರಮಕೈಗೊಳ್ಳು ವಲ್ಲಿ ಜಿಲ್ಲಾಡಳಿತ ವಿಫಲಗೊಂಡಿದೆ.

ಮಾಹಿತಿ ದೊರೆತ ನಂತರವೂ ತಕ್ಷಣ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದು, ನೆರೆಯ ಮೈಸೂರು ಜಿಲ್ಲಾ ಆಸ್ಪತ್ರೆ ಗಳಿಂದ ಆಂಬುಲೆನ್ಸ್ ಮತ್ತು ತುರ್ತು ಚಿಕಿತ್ಸೆ ನೆರವು ಪಡೆಯುವಲ್ಲಿ ಸ್ಥಳೀಯ ಜಿಲ್ಲಾ ಆರೋಗ್ಯಾಧಿಕಾರಿ ವಿಫಲಗೊಂಡಿ ದ್ದಾರೆ. ಸರ್ಕಾರಕ್ಕೆ ಬಂದಿರುವ ಪ್ರಾಥ ಮಿಕ ಮಾಹಿತಿಯ ಆಧಾರದ ಮೇಲೆ ಘಟನೆ ನಡೆದ ಹಲವು ಗಂಟೆ ನಂತರ ಸಾವು-ನೋವುಗಳು ಉಂಟಾದವು.

ಆನಂತರವೇ ರಕ್ಷಣಾ ಕಾರ್ಯಗಳಿಗೆ ಮುಂದಾಗಿದ್ದಾರೆ. ಜಿಲ್ಲಾಡಳಿತವೂ ಈ ವಿಷಯದಲ್ಲಿ ಎಚ್ಚರ ತಪ್ಪಿದೆ, ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರೆ ಕೆಲವರನ್ನು ಸಾವಿನ ದವಡೆಯಿಂದ ಪಾರು ಮಾಡಬಹು ದಿತ್ತು. ವಿಷಯ ತುಂಬಾ ವಿಕೋಪಕ್ಕೆ ಹೋದ ನಂತರ ಅಸ್ವಸ್ಥರನ್ನು ಮೈಸೂ ರಿನ ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ, ಅದರಲ್ಲೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡ ಲಿದ್ದಾರೆ ಎಂಬ ಮಾಹಿತಿ ತಲುಪುತ್ತಿ ದ್ದಂತೆ, ಅಸ್ವಸ್ಥರಿಗೆ ಯುದ್ಧೋಪಾದಿ ಯಲ್ಲಿ ಚಿಕಿತ್ಸೆ ನೀಡಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಮಧ್ಯೆ, ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಗೃಹ ಇಲಾಖೆ ಹೊಣೆ ಹೊತ್ತ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ಆದೇಶ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಾಹಾರ ಸೇವಿಸಿದ್ದರಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥಗೊಂಡವರಿಗೆ ಔಷಧೋಪ ಚಾರ ಸರ್ಕಾರದ ವತಿಯಿಂದ ಮಾಡಲಾಗುತ್ತಿದೆ ಎಂದರು. ಘಟನೆ ಬಗ್ಗೆ ಮುಖ್ಯಮಂತ್ರಿ ಅವರು, ತನಿಖೆಗೆ ಆದೇಶ ಮಾಡಿದ್ದಾರೆ, ಅದು ನನ್ನ ಗಮನಕ್ಕೂ ಬಂದಿದೆ.

ವಿಷಾಹಾರಕ್ಕೆ ಕಾರಣ ಏನು ಎಂದು ತಿಳಿಯಲು ಮತ್ತು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವ ದೃಷ್ಟಿಯಿಂದ ಈ ಆದೇಶ ಮಾಡಲಾಗಿದೆ.

ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಇನ್ನೂ ಕೆಲವು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಆಗದ ಹಾಗೆ ಎಚ್ಚರಿಕೆ ವಹಿಸಬೇಕು. ಮುಜರಾಯಿ ಇಲಾಖೆಯೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇನೆ. ಈ ಮಧ್ಯೆ, ತಮ್ಮ ಕಾರ್ಯಾಲಯದ ಮೂಲಕ ಹೇಳಿಕೆ ಕೊಡಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರು ಅಕ್ಕಪಕ್ಕದ ಗ್ರಾಮಗಳಲ್ಲಿ ಇದ್ದಾರೆಯೇ ಎಂದು ಪತ್ತೆ ಹಚ್ಚಿ ಅವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದ್ದಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವಂತೆ ಸೂಚನೆ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಶೀಘ್ರವೇ ಪೂರ್ಣಗೊಳಿಸಿ ಘಟನೆಗೆ ಕಾರಣ ಪತ್ತೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ.

ಅವರು ಇಂದು ಬೆಳಿಗ್ಗೆಯಿಂದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುಳವಾಡಿ ಘಟನೆಯ ಮಾಹಿತಿ ಪಡೆಯುತ್ತಿದ್ದಾರೆ ಎಂದರು.

Translate »