ಪಠ್ಯಪುಸ್ತಕ ಪರಿಷ್ಕರಣಾ  ಸಮಿತಿ ವಿಸರ್ಜನೆ
News

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ

June 4, 2022

ಬೆಂಗಳೂರು, ಜೂ.3- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯದ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ ದ್ದಾರೆ. ಮಾತ್ರವಲ್ಲ, ಪಠ್ಯ ವಿವಾದ ವಿಚಾರವಾಗಿ ಸರ್ಕಾರ ಒಂದಷ್ಟು ಮಹತ್ವದ ನಿರ್ಣಯಗಳನ್ನೂ ಕೈಗೊಂಡಿದೆ.

ಶಾಲಾ ಪಠ್ಯಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿ ರುವ ಹಿನ್ನೆಲೆಯಲ್ಲಿ ವಿಶೇಷ ಸಭೆ ನಂತರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿ ರುವ ಮುಖ್ಯಮಂತ್ರಿಗಳು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗು ತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿದ್ದಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪೆÇ್ರ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ಧಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್‍ನವರು ತನಿಖೆ ನಡೆಸುವಂತೆ ಸಿಎಂ ಸೂಚಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಬಂದಿರುವ ಆರೋಪ, ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ ಎಂಬುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.

Translate »