ನಟ, ಮಾಜಿ ಸಚಿವ ಅಂಬರೀಶ್ ಹುಟ್ಟುಹಬ್ಬ ಆಚರಣೆ
ಮಂಡ್ಯ

ನಟ, ಮಾಜಿ ಸಚಿವ ಅಂಬರೀಶ್ ಹುಟ್ಟುಹಬ್ಬ ಆಚರಣೆ

May 30, 2018

ಮಂಡ್ಯ: ಮಂಡ್ಯದಲ್ಲಿ ರೆಬೆಲ್‍ಸ್ಟಾರ್ ಅಂಬರೀಶ್ ಹುಟ್ಟುಹಬ್ಬ ವನ್ನು ಸಂಭ್ರಮದಿಂದ ಆಚರಿಸುತ್ತಿರುವ ಅಭಿಮಾನಿಗಳು ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳ ಬೇಕೆಂದು ಮನವಿ ಮಾಡಿದರು.

ನಗರದ ಗಾಂಧಿ ಪಾರ್ಕ್‍ನಲ್ಲಿ, ಅಂಬ ರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಅಂಬಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಭಿಮಾನಿಗಳು ಅಂಬಿ ಕಟೌಟ್‍ಗೆ ಅರಿಶಿಣ, ಕುಂಕುಮ, ಹಾಲಿನ ಅಭಿಷೇಕ ಮಾಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು. ಹುಟ್ಟು ಹಬ್ಬದ ಸಂಭ್ರಮದ ನಡುವೆಯೇ ಅಂಬಿ ರಾಜಕೀಯ ನಿವೃತ್ತಿ ಬಗ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದರು. ಅಂಬಿ ನಡೆಯಿಂದ ಕಳೆದ ವಿಧಾನಸಭಾ ಚುನಾ ವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಎಲ್ಲಾ ಸ್ಥಾನಗಳನ್ನು ಸೋತಿದೆ.

ಅಂಬಿ ರಾಜಕೀಯಕ್ಕೆ ವಾಪಸ್ಸಾದರೆ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠ ವಾಗುತ್ತೆ ಎಂದು ಅಭಿಮಾನಿಗಳು ಅಭಿ ಪ್ರಾಯಪಟ್ಟರು. ಆದರೆ ಅಭಿಮಾನಿಗಳ ಒತ್ತಡಕ್ಕೆ ಮಣ ದು ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿ ಕೊಳ್ಳುತ್ತಾರ ಅನ್ನುವುದನ್ನು ಕಾದು ನೋಡಬೇಕಿದೆ.

ಶ್ರೀರಂಗಪಟ್ಟಣ: ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ 66ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಪಟ್ಟಣದಲ್ಲಿ ಸಂಭ್ರಮದಿಂದ ಆಚರಿಸಿದರು.

ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಕೇಕ್ ಕತ್ತರಿಸುವ ಮೂಲಕ ಅಂಬರೀಶ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು, ಅಂಬರೀಶ್ ಅವರು ನೂರು ವರ್ಷ ಬಾಳಲಿ ಎಂದು ಶುಭ ಕೋರಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಲ್.ಲಿಂಗರಾಜು, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಚಾಲಕ ಎಂ.ಪುಟ್ಟೇಗೌಡ ಮತ್ತಿತರ ಅಭಿಮಾನಿಗಳು ಅಂಬರೀಶ್ ಕಟೌಟ್‍ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಸಾರ್ವ ಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ನೂರಾರು ಅಂಬಿ ಅಭಿ ಮಾನಿಗಳು ಭಾಗವಹಿಸಿದ್ದರು.

Translate »