ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ  ವರಿಷ್ಠರ ನಿರಾಸಕ್ತಿ
News

ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಗೆ ವರಿಷ್ಠರ ನಿರಾಸಕ್ತಿ

February 8, 2022

ಬೆಂಗಳೂರು, ಫೆ. 7(ಕೆಎಂಶಿ)- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮಂತ್ರಿಮಂಡಲ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡಲು ದೆಹಲಿ ಬಿಜೆಪಿ ವರಿಷ್ಠರು ಆಸಕ್ತಿ ತೋರಿದಂತಿಲ್ಲ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಪುತ್ರ ವಿಜಯೇಂದ್ರ ಸೇರಿದಂತೆ ಕೆಲವು ಹೊಸ ಮುಖಗಳಿಗೆ ಮಂತ್ರಿಮಂಡಲ ದಲ್ಲಿ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ವರಿಷ್ಠರ ಅನುಮತಿ ಪಡೆ ಯಲು ಮುಖ್ಯಮಂತ್ರಿಯವರು ದೆಹಲಿಯಲ್ಲಿ ಬಿಡಾರ ಹೂಡಿದ್ದಾರೆ. ಮಂತ್ರಿಮಂಡಲ ಪುನಾರಚನೆ ಸೇರಿದಂತೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಲು ಪ್ರಧಾನಿಯವರು ಸಮಯಾವಕಾಶ ನೀಡಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ, ಕಳೆದ 6 ತಿಂಗಳ ಅವಧಿ ಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರು ಹೊತ್ತಿಗೆ ನೀಡಿದ್ದಲ್ಲದೇ, ಅದರ ಸಾರಾಂಶವನ್ನು ಸಂಕ್ಷಿಪ್ತವಾಗಿ ವಿವರಿ ಸಿದರು. ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆ ಗಳಿಂದ ಜನಸಾಮಾನ್ಯರು ಹಾಗೂ ಬಡವರಿಗೆ ಆಗುತ್ತಿರುವ ಲಾಭದ ಕುರಿತು ಐಸೆಕ್ ನಡೆಸಿರುವ ಅಧ್ಯಯನ ವರದಿಯನ್ನೂ ಕೂಡ ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿಗಳು ನೀಡಿದರು. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು, ರಾಜ್ಯದ ರೈಲ್ವೇ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾನ್ಸುಖ್ ಮಾಂಡವ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು ಆಯಾ ಇಲಾಖೆಯ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.

ಇದಕ್ಕೂ ಮುನ್ನ ದೆಹಲಿಗೆ ಧಾವಿಸುತ್ತಿದ್ದಂತೆ ಪ್ರಧಾನಿ ಕಾರ್ಯಾ ಲಯದ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಭೇಟಿಯ ನಂತರ ಪಂಚತಾರಾ ಹೊಟೇಲ್‍ನಲ್ಲಿ ರಾಜ್ಯದ ಸಂಸದರು ಹಾಗೂ ರಾಜ್ಯ ವನ್ನು ಪ್ರತಿನಿಧಿಸುವ ಕೇಂದ್ರ ಸಚಿವರೊಟ್ಟಿಗೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೊಮ್ಮಾಯಿ ಅವರು ಸುದೀರ್ಘ ಸಮಾಲೋ ಚನೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಷಿ, ಭಗವಂತ ಖೂಬಾ, ರಾಜೀವ್ ಚಂದ್ರಶೇಖರ್, ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಇನ್ನಿತರರು ಭಾಗವಹಿಸಿದ್ದರು. ರಾಜ್ಯದ ಸಂಪುಟ ಪುನಾರಚನೆ ಸಂಬಂಧ ಚರ್ಚಿಸುವ ಸಲುವಾಗಿ ಭೇಟಿ ಮಾಡಲು ಮುಖ್ಯ ಮಂತ್ರಿಗಳಿಗೆ ಪ್ರಧಾನಿ ನರೇಂದ್ರಮೋದಿಯವರು ಸಮಯಾವಕಾಶ ನೀಡಿಲ್ಲ. ಆದರೆ ಅವರು ತಮ್ಮ ಪ್ರಧಾನಿ ಕಾರ್ಯಾಲಯದ ಕಚೇರಿ ಸಹಾಯಕ ಸಚಿವ ಜಿತೇಂದ್ರಸಿಂಗ್ ಅವರ ಭೇಟಿಯಾಗಿ ಮಾಹಿತಿ ನೀಡುವಂತೆ ಸಂದೇಶ ನೀಡಿದ್ದರು. ಅವರ ಸಂದೇಶದಂತೆ ಬೊಮ್ಮಾಯಿ ಅವರು ದೆಹಲಿಗೆ ತಲುಪುತ್ತಿದ್ದಂತೆ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಉತ್ತರ ಭಾರತ ಸೇರಿದಂತೆ ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ನಾಯಕರು ತಮ್ಮನ್ನು ತೊಡಗಿಸಿಕೊಂಡಿರುವುದರಿಂದ ಮುಖ್ಯಮಂತ್ರಿಯವರ ಭೇಟಿಗೆ ಸಮಯಾವಕಾಶ ದೊರೆಯುತ್ತಿಲ್ಲ.

ಇಷ್ಟರ ನಡುವೆಯೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೂಲಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ಪ್ರಯತ್ನಿಸುತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಪ್ರಕ್ರಿಯೆಯಲ್ಲಿ ರಾಜನಾಥ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದು, ಅವರ ಮೂಲಕ ಸಂಪುಟ ಪುನಾರಚನೆಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

Translate »