ಸರ್ಕಾರದ ಸೌಲಭ್ಯ ಸದ್ಬಳಕೆಗೆ ಬಿಇಓ ಸಲಹೆ
ಹಾಸನ

ಸರ್ಕಾರದ ಸೌಲಭ್ಯ ಸದ್ಬಳಕೆಗೆ ಬಿಇಓ ಸಲಹೆ

January 21, 2019

ಅರಸೀಕೆರೆ: ಸರ್ಕಾರ ಹಿಂದು ಳಿದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಗಳ ಮೂಲಕ ನೀಡುತ್ತಿರುವ ಸವಲತ್ತು ಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತ ನಾಡಿದ ಅವರು, ಅನುಭವಿ ಶಿಕ್ಷಕರ ಬೋಧನೆ ಜೊತೆಗೆ ಯಾವ ಖಾಸಗಿ ಶಾಲಾ-ಕಾಲೇಜುಗಳಿಗೂ ಕಡಿಮೆ ಇಲ್ಲದ ರೀತಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಮಾರ್ಗದರ್ಶನ ದೊರೆಯುತ್ತಿ ದ್ದರೂ, ಪೆÇೀಷಕರು ಹಾಗೂ ವಿದ್ಯಾರ್ಥಿ ಗಳು ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ವಾಲುತ್ತಿ ರುವುದು ವಿಷಾದನೀಯ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾ ಧ್ಯಕ್ಷ ಕೆ.ಮಂಜುನಾಥ್ ಮಾತನಾಡಿ, ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡರ ಮಾರ್ಗದರ್ಶನದಲ್ಲಿ ನಗರ ಸೇರಿದಂತೆ ತಾಲೂಕಿನ ಸರ್ಕಾರಿ ಶಾಲಾ ಕಾಲೇಜುಗಳು ಹಾಗೂ ವಸತಿ ಶಾಲೆಗಳು ಕ್ರಿಯಾ ಶೀಲ ವಾಗಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ತಮ್ಮ ಅಭಿ ರುಚಿಗೆ ಅನುಗುಣವಾಗಿ ಕಲೆ, ಸಂಗೀತ, ಕ್ರೀಡೆ, ಜ್ಞಾನ ವಿಜ್ಞಾನ ಕ್ಷೇತ್ರ ಗಳಲ್ಲಿ ಸಾಧನೆ ಮಾಡುವ ಮೂಲಕ ತಾವು ಓದಿದ ಶಾಲಾ- ಕಾಲೇಜು ಹಾಗೂ ಪೆÇೀಷಕರಿಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಜಿ.ರಾಜಣ್ಣ ಮಾತನಾಡಿ, 5 ದಶಕಕ್ಕೂ ಹೆಚ್ಚಿನ ಇತಿ ಹಾಸವುಳ್ಳ ನಮ್ಮ ಶಾಲಾ-ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನಾನಾ ಕ್ಷೇತ್ರಗಲ್ಲಿ ಗಮನಾರ್ಹ ಸಾಧನೆ ಮಾಡಿ ಕಾಲೇಜಿಗೂ ಹಾಗೂ ತಾಲೂಕಿಗೂ ಕೀರ್ತಿ ತಂದಿದ್ದಾರೆ. ಅವರಂತೆ ನೀವು ಸಹ ಸಾಧನೆ ಮಾಡಬೇಕು. ಅಲ್ಲದೆ ಹೆಚ್ಚಿನ ಮಾರ್ಗ ದರ್ಶನದ ಅವಶ್ಯಕತೆ ಇದ್ದರೇ ಮುಕ್ತವಾಗಿ ನಮ್ಮಲ್ಲಿ ಚರ್ಚಿಸಿ. ನಮ್ಮ ಅಧ್ಯಾಪಕ ವೃಂದ ತಮಗೆ ಮಾರ್ಗದರ್ಶನ ನೀಡಲು ಸದಾ ಸಿದ್ಧವಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಜಗದೀಶ್ ನಾಯ್ಕ್, ನಗರಸಭೆ ಸದಸ್ಯೆ ಸುಜಾತ ರಮೇಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಂಗಾಧರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಆನಂದ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಬೀರೇ ಗೌಡ, ಮಹಾಲಿಂಗಪ್ಪ, ಪ್ರೌಢಶಾಲಾ ಹಿರಿಯ ಸಹಶಿಕ್ಷಕರಾದ ಎಸ್.ಭಾರತಿ, ಜಿಲ್ಲಾ ಭಾರತೀಯ ಸೇವಾದಳದ ಉಪಾ ಧ್ಯಕ್ಷ ಹೆಚ್.ಡಿ.ಸೀತಾರಾಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Translate »