ಮುನಿಶ್ರೀ ಅಮೋಘಕೀರ್ತಿ ಮಹಾರಾಜರ ಜನ್ಮೋತ್ಸವ
ಹಾಸನ

ಮುನಿಶ್ರೀ ಅಮೋಘಕೀರ್ತಿ ಮಹಾರಾಜರ ಜನ್ಮೋತ್ಸವ

December 18, 2018

ಶ್ರವಣಬೆಳಗೊಳ: ಮುನಿಶ್ರೀ ಅಮೋಘಕೀರ್ತಿ ಮಹಾರಾಜರು ವಿದ್ವತ್‍ಪೂರ್ಣ ಪ್ರವಚನ, ಸ್ವಾಧ್ಯಾಯ, ತಪಸ್ಸಿನಿಂದ ದೇಶಾದ್ಯಂತ ಅನೇಕ ವಿಕಾಸ ಕಾರ್ಯಗಳನ್ನು ಮಾಡುತ್ತಾ ಧರ್ಮ ಪ್ರಭಾವನೆ ಮಾಡುತ್ತಿದ್ದಾರೆ ಎಂದು ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಪಟ್ಟಣದ ಚಾವುಂಡರಾಯ ಸಭಾ ಮಂಟಪದಲ್ಲಿ ಆಯೋಜಿಸಿದ್ದ ಮುನಿಶ್ರೀ ಅಮೋಘಕೀರ್ತಿ ಮಹಾರಾಜರ 38ನೇ ಜನ್ಮ ಜಯಂತಿ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಜಿನಶಾಸನ, ಜಿನಪೂಜೆ, ಜಿನಾಗಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಸಮ್ಯಗ್ದರ್ಶನ, ಸಮ್ಯಕ್ ಜ್ಞಾನ, ಸಮ್ಯಕ್ ಚಾರಿತ್ರ್ಯ ಎಂಬ ರತ್ನತ್ರಯಗಳನ್ನು ಕಾಪಾಡಿಕೊಂಡು ಬರುತ್ತಿದ್ದು, ಜಿನಧರ್ಮದ ಸಂರಕ್ಷಕರಾಗಿದ್ದಾರೆ ಎಂದರು.
ನಮ್ಮ 50ನೇ ವರ್ಷದ ದೀಕ್ಷಾ ಸಮಾರಂಭವನ್ನು ನಮಗೆ ತಿಳಿಯದಂತೆ ಗುರುಕುಲದ ವಿದ್ಯಾರ್ಥಿಗಳು, ರಾಜ್ಯ ಮತ್ತು ರಾಷ್ಟ್ರದ ವಿವಿಧ ಸಮಾಜಗಳು ಅತ್ಯಂತ ಅರ್ಥ ಪೂರ್ಣವಾಗಿ ನೆರವೇರಿದ್ದು, ಇಂತಹ ಕಾರ್ಯಕ್ರಮವನ್ನು ಈ 50 ವರ್ಷಗಳಲ್ಲಿ ನೋಡಿರಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಚಾರ್ಯ ವರ್ಧಮಾನಸಾಗರ ಮಹಾರಾಜರು, ಮುನಿಶ್ರೀ ಅಮೋಘಕೀರ್ತಿ ಮಹಾರಾಜರು, ಮುನಿಶ್ರೀ ಪ್ರಜ್ಞಾಸಾಗರ ಮಹಾರಾಜರು ಆಶೀರ್ವಚನ ನೀಡಿದರು.

Translate »