ಆಡಳಿತ ವೈಫಲ್ಯದಿಂದ ಬೇಸತ್ತ ಜನ ಬಿಜೆಪಿ ಧೂಳೀಪಟ ಮಾಡ್ತಾರೆ
ಮೈಸೂರು

ಆಡಳಿತ ವೈಫಲ್ಯದಿಂದ ಬೇಸತ್ತ ಜನ ಬಿಜೆಪಿ ಧೂಳೀಪಟ ಮಾಡ್ತಾರೆ

September 22, 2021

ಮೈಸೂರು, ಸೆ.21(ಆರ್‍ಕೆಬಿ)- ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಆಡ ಳಿತ ವೈಫಲ್ಯದಿಂದ ಜನರು ಬೇಸತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾಯುತ್ತಿದ್ದಾರೆ. ಆ ಮೂಲಕ ಬಿಜೆಪಿ ಯನ್ನು ಧೂಳೀಪಟ ಮಾಡಲಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಹ ಅಧ್ಯಕ್ಷ ವಿ.ಆರ್.ಸುದರ್ಶನ್ ತಿಳಿಸಿದರು.

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಗ್ರಾಮಾಂ ತರ ಕಾಂಗ್ರೆಸ್ ವತಿಯಿಂದ ಮಂಗಳ ವಾರ ಆಯೋಜಿಸಿದ್ದ ಚಾಮರಾಜ ವಿಧಾನ ಸಭಾ ಕ್ಷೇತ್ರ ಮತಗಟ್ಟೆ ಮಟ್ಟದ ಪ್ರತಿನಿಧಿ ಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಬಿಜೆಪಿ ಜನ ಸಾಮಾ ನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಕರ್ನಾ ಟಕದ ಪ್ರತಿನಿಧಿಯಾಗಿ ನಿರ್ಮಲಾ ಸೀತಾ ರಾಮನ್ ಅವರಿಗೆ ಮಹಿಳೆಯರ ಬಗ್ಗೆ ಕಾಳಜಿಯೇ ಇಲ್ಲ. ಮಹಿಳೆಯರಿಗೆ ಅನ್ಯಾಯವಾದರೆ ಕಾಂಗ್ರೆಸ್ ಪ್ರತಿಭಟಿಸ ಬೇಕು. ಆ ನಿಟ್ಟಿನಲ್ಲಿ ಪಕ್ಷವನ್ನು ಸಂಘ ಟಿಸಲಾಗುತ್ತಿದೆ ಎಂದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು. ಅದಕ್ಕಾಗಿ ಪಕ್ಷವನ್ನು ಸದೃಢ ವಾಗಿ ಬೆಳೆಸಲಾಗುತ್ತಿದೆ. ಯುವಕರು, ಮಹಿಳೆಯರು ಮತ್ತು ಹಿಂದುಳಿದವರನ್ನು ಪಕ್ಷಕ್ಕೆ ಅಧಿಕ ಸಂಖ್ಯೆಯಲ್ಲಿ ಸೆಳೆಯಲು ಮುಂದಾಗಿದೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಕಾಂಗ್ರೆಸ್ ಪಕ್ಷದ ನಾಯಕರು. ಭಾರತದ ಸಂವಿಧಾನ ಶ್ರೇಷ್ಠವಾದದ್ದು. 1970ರಲ್ಲಿ ರೈತ, ಮಹಿಳಾ, ಕಾರ್ಮಿಕ, ಬಡವರ, ದಲಿತರ ಪರವಾಗಿ ಕಾಂಗ್ರೆಸ್ ಸೇವೆ ಸಲ್ಲಿಸಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ರಾಜ್ಯದಲ್ಲಿ ದೇವರಾಜ ಅರಸು ಮತ್ತು ಇನ್ನಿತರರು ಜನಪರ ಆಡಳಿತ ನೀಡಿದ್ದಾರೆ. ರಾಜೀವ್ ಗಾಂಧಿ ಪ್ರಧಾನಿಯಾಗಿ ಯುವಕರಿಗೆ ಮತ ದಾನದ ಹಕ್ಕು ಕಲ್ಪಿಸಿಕೊಟ್ಟಿದ್ದಾರೆ. ಸಿದ್ದ ರಾಮಯ್ಯ ಐದು ವರ್ಷ ಪೂರ್ಣ ಆಡಳಿತದಲ್ಲಿ ಅನೇಕ ಒಳ್ಳೆಯ ಕಾರ್ಯ ಕ್ರಮಗಳನ್ನು ನೀಡಿದ್ದಾರೆ. ಮಹಿಳೆ ಯರಿಗೆ ಶೇ.33ರಷ್ಟು ಮೀಸಲಾತಿ ನೀಡಿ ದರೆ, ಮನಮೋಹನ ಸಿಂಗ್ ಪ್ರಧಾನಿ ಯಾಗಿದ್ದಾಗ ಅದನ್ನು ಶೇ.50ಕ್ಕೆ ಏರಿಕೆ ಮಾಡಿದ್ದಾರೆ. ಇದೆಲ್ಲವೂ ಕಾಂಗ್ರೆಸ್‍ನ ಜನಪರ ಕಾರ್ಯಕ್ರಮಗಳೆಂಬುದನ್ನು ತೋರಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ರಾಜ್ಯದ 4ನೇ ಹಣಕಾಸು ಆಯೋಗದ ಮಾಜಿ ಸದಸ್ಯ ಅಮರನಾಥ್, ಮಾಜಿ ಶಾಸಕ ವಾಸು, ಮಾಜಿ ಮೇಯರ್ ಬಿ.ಕೆ.ಪ್ರಕಾಶ್, ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ, ಎಚ್.ಎ.ವೆಂಕ ಟೇಶ್, ನಗರಾಧ್ಯಕ್ಷ ಆರ್.ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮುಖಂಡರಾದ ಕೆ.ಹರೀಶ್‍ಗೌಡ, ಈಶ್ವರ ಚಕ್ಕಡಿ ಇನ್ನಿತರರು ಉಪಸ್ಥಿತರಿದ್ದರು.

Translate »