ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ
ಮೈಸೂರು

ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ

April 9, 2019

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಅನ್ನೇ ಬಿಜೆಪಿ ಬಂಡವಾಳ ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡು ತ್ತಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಹೊಸ ಹುಂಡಿ, ಚಾಮುಂಡಿಬೆಟ್ಟ, ಆಲನಹಳ್ಳಿ, ಹಂಚ್ಯಾ, ಸಿದ್ದಲಿಂಗಪುರದ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿ ಕೊಳ್ಳಲಾಗಿದೆ. ಸಚಿವರಾದ ಜಿ.ಟಿ.ದೇವೇ ಗೌಡರು, ಸಾ.ರಾ.ಮಹೇಶ್ ಸಹ ಬೆಂಬಲ ಸೂಚಿಸಿದ್ದಾರೆ. ಎರಡೂ ಪಕ್ಷಗಳ ಮುಖಂ ಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಗೆಲುವಿಗೆ ಶ್ರಮಿಸ ಬೇಕು ಎಂದು ಮನವಿ ಮಾಡಿದರು.

ಈ ಚುನಾವಣೆ ಮಹತ್ವದ್ದಾಗಿದೆ. ಸಂವಿ ಧಾನ ರಕ್ಷಿಸುವುದಕ್ಕಾಗಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಬೇಕು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಲು ಸರ್ಜಿಕಲ್ ಸ್ಟ್ರೈಕ್ ಮುಂದಿಟ್ಟುಕೊಂಡು ಜನರ ಸಹಾ ನುಭೂತಿ ಗಳಿಸುವ ಹುನ್ನಾರ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ರೈತರು ಬಡವರನ್ನು ಕಡೆಗಣಿಸಿ ಬ್ಯಾಂಕ್‍ಗಳನ್ನು ಲೂಟಿ ಮಾಡಿ ದೇಶಬಿಟ್ಟು ಹೋಗಿರು ವವರು, ಶ್ರೀಮಂತರ ಪರ ಇದ್ದಾರೆ. ದೇಶ ದಲ್ಲಿ ಉದ್ಯೋಗ ಸೃಷ್ಟಿಮಾಡದೆ ಪ್ರತಿ ವರ್ಷ ಕೋಟ್ಯಾಂತರ ಜನ ನಿರುದ್ಯೋಗಿಗಳಾಗು ತ್ತಿದ್ದಾರೆ. ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸದೆ ಮಾತನ್ನೇ ಬಂಡವಾಳ ಮಾಡಿ ಕೊಂಡಿರುವ ಬಿಜೆಪಿಯನ್ನು ಸೋಲಿಸಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ, ಜಿ.ಪಂ. ಮಾಜಿ ಅಧ್ಯಕ್ಷ ಕೆ. ಮರೀಗೌಡ, ಕೆಪಿಸಿಸಿ ಸದಸ್ಯ ನರಸೇಗೌಡ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಸಿ.ಎನ್.ಮಂಜೇಗೌಡ, ಕಾಂಗ್ರೆಸ್ ಮುಖಂಡರಾದ ಕೃಷ್ಣಕುಮಾರ್ ಸಾಗರ್, ಹೊಸಹುಂಡಿ ರಘು, ಎಪಿ ಎಂಸಿ ಸದಸ್ಯ ಬಸವರಾಜು, ತಾ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ತಾಪಂ ಸದಸ್ಯ ಸಿ.ಎಂ.ಸಿದ್ದರಾಮೇಗೌಡ, ಜಿಪಂ ಸದಸ್ಯೆ ಕೆ.ವೈ. ಭಾಗ್ಯ, ಮಂಜುಳಾ ಮಾನಸ, ಜಿ.ಪಂ.ಮಾಜಿ ಸದಸ್ಯರಾದ ನಂದಿನಿ ಚಂದ್ರಶೇಖರ್, ಸುಧಾ ಮಹಾ ದೇವಯ್ಯ, ರತ್ನಮ್ಮ ಗೋಪಾಲರಾಜ್, ಜೆಡಿಎಸ್ ಮುಖಂಡರಾದ ಹೊಸ ಹುಂಡಿ ರಾಜು, ರಮೇಶ್, ಗುರುಪಾದ ಸ್ವಾಮಿ, ನಾಡನಹಳ್ಳಿ ರವಿ, ರಾಣಿ ಶಿವಣ್ಣ, ನೂತನ್, ನಜರ್‍ಬಾದ್ ನಾಗರಾಜ್, ಉಮಾಶಂಕರ್, ಹರೀಶ್, ಬಸವಣ್ಣ, ಶಿವಣ್ಣ, ಪ್ರಸಾದ್, ಶಶಿಕುಮಾರ್, ವೈ.ಕೆ. ಸ್ವಾಮಿ, ಹಂಚ್ಯಾ ಸಣ್ಣಸ್ವಾಮಿ, ಸೋಮಣ್ಣ ಇನ್ನಿತರರು ಉಪಸ್ಥಿತರಿದ್ದರು.

Translate »