ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೊಡಗು

ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

October 3, 2018

ಮಡಿಕೇರಿ:  ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕ್‍ರಾಜ್ ಹತ್ಯೆ ಖಂಡಿಸಿ, ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ನೇತೃತ್ವ ದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಮಾಡಿದ ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ, ಶಾಸಕ ಕೆ.ಜಿ.ಬೋಪಯ್ಯ ನಿಷ್ಠಾ ವಂತ, ಸಜ್ಜನರಾದ ತಿಲಕ್‍ರಾಜ್ ಎಂಬ ಬಿಜೆಪಿ ಕಾರ್ಯಕರ್ತ ನನ್ನು ಮರಗೋಡು ಗ್ರಾಪಂ ಜೆಡಿಎಸ್ ಸದಸ್ಯ ಹತ್ಯೆ ಮಾಡಿದ್ದಾನೆ. ರಾಜಕೀಯ ದ್ವೇಷದಿಂದ ತಾನು ಮುಖ್ಯಮಂತ್ರಿಯ ಆಪ್ತನೆಂದು ಹೇಳಿಕೊಂಡು ಅಮಾಯಕ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ರಾಜ್ಯದೆಲ್ಲೆಡೆ ಇದೇ ಪರಿಸ್ಥಿತಿ ಇದ್ದು ಅಮಾಯಕರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೋಲಿಸರು ಹತ್ಯೆ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿ ದ್ದಾರೆ. ಜಿಲ್ಲೆಯಲ್ಲಿ ಇಸ್ಪಿಟ್ ಕ್ಲಬ್‍ಗಳು ನಾಯಿಕೊಡೆಯಂತೆ ತಲೆಯೆ ತ್ತುತ್ತಿವೆ. ಕಾನೂನಿಗೆ ಗೌರವ ಕೊಡುವ ಕೆಲಸ ರಾಜ್ಯದಲ್ಲಿ ಆಗಬೇಕು ಎಂದರು. ಮಂಡ್ಯದಲ್ಲಿ ತಲೆಕಡಿದು ಮೆರವಣಿಗೆ ಹೋಗುತ್ತಾರೆ. ನಾವು ಯಾವ ರಾಜ್ಯದಲ್ಲಿದ್ದೇವೆ ಎಂಬ ಪ್ರಶ್ನೆ ಮೂಡುತ್ತಿದ್ದು, ರಾಜ್ಯ ದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲವಾದರೆ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಕ್ರೋಶ ಹೊರಗೆಡವಿದರು.

ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಜೆಡಿಎಸ್ ಗೂಂಡಾಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು ಈವರೆಗೆ 5 ಮಂದಿಯನ್ನು ಕೊಲೆ ಮಾಡಲಾಗಿದೆ. ನಮ್ಮ ಕಾನೂನು ವ್ಯವಸ್ಥೆ ಯಾವ ಮಟ್ಟದಲ್ಲಿದೆ ಎಂಬುದು ಇದರಿಂದಲೇ ತಿಳಿಯುತ್ತದೆ. ಗೃಹಮಂತ್ರಿಗಳು ನಿಷ್ಪ್ರಯೋಜಕ ರಂತೆ ವರ್ತಿಸುತ್ತಿದ್ದಾರೆ. ಇನ್ನು ಮುಂದೆ ಇಂತಹ ಘಟನೆಗಳು ನಡೆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದಂತೆ ಬಿಜೆಪಿ ಕಾರ್ಯ ಕರ್ತರು ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್, ಮಡಿ ಕೇರಿ ಎಪಿಎಂಸಿ ಅಧ್ಯಕ್ಷ ಕಾಂಗೀರ ಸತೀಶ್, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ಪ್ರಮುಖರಾದ ರಾಬಿನ್ ದೇವಯ್ಯ, ಮಹೇಶ್ ಜೈನಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಮರಗೋಡು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »