ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಂಪುಟ ವಿಸ್ತರಣೆ
ಮೈಸೂರು

ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಂಪುಟ ವಿಸ್ತರಣೆ

October 6, 2018

ನವದೆಹಲಿ: ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಮಾಡಬೇಕು ಎಂದು ಹಲವು ನಾಯಕರು ಬಯಸಿದ್ದಾರೆ. ಆದರೆ ಯಾರನ್ನು ಸಂಪುಟಕ್ಕೆ ಸೇರಿಸ ಬೇಕು ಎಂಬುದನ್ನು ಕಾಂಗ್ರೆಸ್ ನಿರ್ಧಾರ ಮಾಡಬೇಕಿದೆ ಎಂದರು.

ಇಂದು ಅಥವಾ ನಾಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಯತ್ನಿಸುತ್ತೇನೆ ಮತ್ತು ಅವರ ನಿರ್ಧಾರದಂತೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಇದೇ ವೇಳೆ, ಸಾಲಮನ್ನಾ ಸೌಲಭ್ಯ ಪಡೆಯಲು ಬೆಳೆ ವಿಮೆ ವಿವರ ನೀಡಲು ರೈತರಿಗೆ ರಾಜ್ಯ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ. ಆದರೆ ಆದಷ್ಟು ಬೇಗ ತಮ್ಮ ತಮ್ಮ ಹೋಬಳಿಯಲ್ಲಿರುವ ಕಂದಾಯ ಇಲಾಖೆಗೆ ವಿವರ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Translate »