ಹಲಗೆ ವಡೇರಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣ  ತನಿಖೆಗೆ ತಡೆ ನೀಡಲು ಸುಪ್ರೀಂ ನಕಾರ  ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ..!
ಮೈಸೂರು

ಹಲಗೆ ವಡೇರಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣ ತನಿಖೆಗೆ ತಡೆ ನೀಡಲು ಸುಪ್ರೀಂ ನಕಾರ ಕುಮಾರಸ್ವಾಮಿಗೆ ಎದುರಾಯ್ತು ಸಂಕಷ್ಟ..!

January 19, 2021

ನವದೆಹಲಿ: ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ. ಹಲಗೆ ವಡೇರ ಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ತನಿಖೆ ಮುಂದು ವರೆಸುವಂತೆ ಸೂಚಿಸಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ನ್ಯಾ. ಅಶೋಕ್ ಭೂಷಣ್ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿ ಗಳ ವಿಶೇಷ ಕೋರ್ಟ್ ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿ ನಿಧಿಗಳ ವಿಶೇಷ ಕೋರ್ಟ್‍ನ ಆದೇಶ ಪ್ರಶ್ನಿಸಿ, ಎಚ್‍ಡಿಕೆ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂ ಕೋರ್ಟ್ ಸಹ ಅರ್ಜಿ ವಜಾ ಮಾಡಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ತಿಳಿಸಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

Translate »