ನವದೆಹಲಿ: ನ್ಯಾಷನಲ್ ಹೆರಾಲ್ಡ್‍ಗೆ ಸಂಬಂ ಧಿಸಿದ ಅಕ್ರಮ ಹಣ ವರ್ಗಾ ವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಜೂನ್ 8 ರಂದು ವಿಚಾರಣೆಗೆ ಹಾಜರಾಗು ವಂತೆ ಸೂಚಿಸಿ ಜಾರಿ ನಿರ್ದೇ ಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ.
2015ರಲ್ಲಿ ತನಿಖಾ ಸಂಸ್ಥೆ ಯಿಂದ ಮುಕ್ತಾಯವಾಗಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕ ರಣದೊಂದಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ.
ಈ ಬಗ್ಗೆ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಖಚಿತಪಡಿಸಿದ್ದು, ಸೋನಿಯಾ ಗಾಂಧಿ ಅವರು ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜ ರಾಗುತ್ತಾರೆ. ಆದರೆ ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕೆಲವು ವಿನಾ ಯಿತಿಗಳನ್ನು ಕೋರುತ್ತದೆ.
ಮನಿ ಲಾಂಡರಿಂಗ್ ಅಥವಾ ಯಾವುದೇ ಹಣ ವಿನಿಮಯದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಸಿಂಘ್ವಿ ಹೇಳಿದ್ದಾರೆ. ಇನ್ನು ಇದೇ ವಿಚಾರವಾಗಿ ಸುದ್ದಿಗಾರ ರೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇ ವಾಲಾ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಆರಂಭವಾಗಿದ್ದು 1942ರಲ್ಲಿ. ಅಂದು ಬ್ರಿಟಿಷರು ಪತ್ರಿಕೆಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದರು. ಇಂದು ಮೋದಿ ಸರ್ಕಾರವೂ ಅದನ್ನೇ ಮಾಡುತ್ತಿದೆ ಮತ್ತು ಇದಕ್ಕೆ ಜಾರಿ ನಿರ್ದೇಶನಾಲಯವನ್ನು ಬಳಸಲಾಗುತ್ತಿದೆ. ಇಡಿ ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನೋಟಿಸ್ ನೀಡಿದೆ ಎಂದು ಕಿಡಿಕಾರಿದ್ದಾರೆ.