ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆಗೆ ಕೇಂದ್ರ ಶಿಫಾರಸು
ಮೈಸೂರು

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆಗೆ ಕೇಂದ್ರ ಶಿಫಾರಸು

May 4, 2019

ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ರಾತ್ರಿ ಸಂಚಾರ ನಿರ್ಬಂಧವನ್ನು ಮುಂದುವರಿಸಲು ಕೇಂದ್ರ ಸರ್ಕಾರ ಮತ್ತೆ ಶಿಫಾರಸು ಮಾಡಿದ್ದು ಕೇರಳ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಸರ ಮತ್ತು ಅರಣ್ಯ ಸಚಿವಾಲಯ ಜೊತೆಗೆ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ಟು ಸಲ್ಲಿಸಿ ಬಂಡೀಪುರ ರಾಷ್ಟ್ರೀಯ ಹೆದ್ದಾರಿ-212ರಲ್ಲಿ ರಾತ್ರಿ ವೇಳೆ ಸಂಚಾರದ ನಿಷೇಧ ನಿರ್ಬಂಧದ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಕಾರ್ಯದರ್ಶಿಗಳ ಸಮಿತಿ ಮಾಡಿರುವ ಶಿಫಾರಸುಗಳನ್ನು ಒಪ್ಪಿಕೊಳ್ಳಲಾಗಿದೆ ಎಂದು ತನ್ನ ನಿಲುವನ್ನು ತಿಳಿಸಿದೆ.

2010ರಲ್ಲಿ ಕರ್ನಾಟಕ ಹೈಕೋರ್ಟ್ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ವನ್ಯಜೀವಿಗಳ ಜೀವ ರಕ್ಷಣೆ ದೃಷ್ಟಿಯಿಂದ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಇದರಿಂದಾಗಿ ಕೇರಳಕ್ಕೆ ಹೋಗುವ ಮತ್ತು ಅಲ್ಲಿಂದ ರಾತ್ರಿ 9 ಗಂಟೆ ಮೇಲೆ ಬರುವ ವಾಹನಗಳ ಸಂಚಾರಕ್ಕೆ ತೊಂದರೆಯಾ ಗುತ್ತದೆ. ಹೀಗಾಗಿ ನಿರ್ಬಂಧವನ್ನು ಕೇರಳ ಸರ್ಕಾರ ವಿರೋಧಿಸಿತ್ತು. ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್ಟಿಗೆ ಸಂಬಂಧಿಸಿ ದಂತೆ ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಲು ಬಯಸಿ ರುವುದರಿಂದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಕೇಂದ್ರ ಸರ್ಕಾರದ ಶಿಫಾರಸನ್ನು ವನ್ಯಜೀವಿ ರಕ್ಷಣೆ ಕಾರ್ಯಕರ್ತರು ಸ್ವಾಗತಿಸಿದ್ದಾರೆ. ಇದೊಂದು ಧನಾತ್ಮಕ ಬೆಳವಣಿಗೆ ಎಂದು ವೈಲ್ಡ್ ಲೈಫ್ ಫಸ್ಟ್‍ನ ಭಾರ್ಗವ್ ಹೇಳಿ ದ್ದಾರೆ. ರಾಷ್ಟ್ರೀಯ ಹೆದ್ದಾರಿ -67ರಿಂದ ಊಟಿಗೆ ಹೋಗುವ ಮಾರ್ಗದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ನಿರ್ಬಂಧ ವಿಧಿಸಿರು ವುದು ಕೂಡ ಒಳ್ಳೆಯದು. ಈ ಸಂಬಂಧ ಸುಪ್ರೀಂ ಕೋರ್ಟ್‍ನಲ್ಲಿ ಹೋರಾಟ ಮುಂದುವರಿಸುತ್ತೇವೆ ಎನ್ನುತ್ತಾರೆ.

Translate »